ಮಾಗಡಿ ತಾಲ್ಲೂಕಿಗೆ ಹೇಮಾವತಿ ನೀರು ಹರಿಸುವ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ತುಮಕೂರಿನ ವಿರೋಧ ಖಂಡಿಸಿ ಶಾಸಕ ಎಚ್.ಸಿ. ಬಾಲಕೃಷ್ಣ ನೇತೃತ್ವದಲ್ಲಿ ಗುರುವಾರ ತಾಲ್ಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿಯ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ –75ರಲ್ಲಿ ಪಾದಯಾತ್ರೆ ನಡೆಯಿತು
ಮಾಗಡಿ ತಾಲ್ಲೂಕಿಗೆ ಹೇಮಾವತಿ ನೀರು ಹರಿಸುವಂತೆ ಒತ್ತಾಯಿಸಿ ಕುದೂರು ಪೊಲೀಸ್ ಠಾಣೆ ಮುಂಭಾಗ ತಹಶೀಲ್ದಾರ್ ಶರತ್ ಕುಮಾರ್ ಅವರಿಗೆ ಶಾಸಕ ಎಚ್.ಸಿ. ಬಾಲಕೃಷ್ಣ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ ಹಾಗೂ ಮುಖಂಡರು ಮನವಿ ಸಲ್ಲಿಸಿದರು
ಹೆದ್ದಾರಿ ತಡೆ ಪ್ರತಿಭಟನೆ ಹಿನ್ನೆಲೆಯಲ್ಲಿ ಮರೂರು ಹ್ಯಾಂಡ್ ಪೋಸ್ಟ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು

ರಾಮನಗರ ಮತ್ತು ಮಾಗಡಿ ನನಗೆ ಎರಡು ಕಣ್ಣುಗಳಿದ್ದಂತೆ ಎನ್ನುತ್ತಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಹೇಮಾವತಿ ನೀರಿನ ವಿಷಯದಲ್ಲಿ ಮಾಗಡಿಗೆ ಅನ್ಯಾಯವಾಗುತ್ತಿದ್ದರೂ ಯಾಕೆ ಇದುವರೆಗೆ ಒಂದೇ ಒಂದು ಹೇಳಿಕೆ ಕೊಟ್ಟಿಲ್ಲ?
– ಎಚ್.ಸಿ. ಬಾಲಕೃಷ್ಣ ಶಾಸಕ
ಮಾಗಡಿ ಪಾಲಿನ ನೀರನ್ನು ಬಿಡುವುದಿಲ್ಲ ಎಂದು ತುಮಕೂರಿನವರು ಹೇಳುವುದು ಸರಿಯಲ್ಲ. ಅಲ್ಲಿಗೆ ನೀರು ಬರದಂತೆ ಹೊಳೆನರಸಿಪುರದವರು ತಡೆದರೆ ಅವರ ಪರಿಸ್ಥಿತಿ ಏನಾಗಬಹುದು? ಮೇಲ್ಭಾಗದಿಂದ ಬರುವ ನೀರನ್ನು ತಡೆಯಲು ಸಾಧ್ಯವಿಲ್ಲ.
– ಎಚ್.ಎಂ. ರೇವಣ್ಣ ರಾಜ್ಯಾಧ್ಯಕ್ಷ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ