ರಾಮನಗರ: ಎಚ್.ಐ.ವಿ, ಏಡ್ಸ್ ಕುರಿತ ಪ್ರಚಾರಾಂದೋಲನ ಕಾರ್ಯಕ್ರಮ ಅಂಗವಾಗಿ ಗುರುವಾರ ನಗರದಲ್ಲಿ ಬೈಕ್ ರ್ಯಾಲಿ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಬೆಂಗಳೂರು ದಕ್ಷಿಣ ಜಿಲ್ಲೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಮನಗರ, ರೋಟರಿ ಸಿಲ್ಕ್ ಸಿಟಿ ಬೆಳ್ಳಿ ರಕ್ತ ಕೇಂದ್ರದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ನಗರದ ಸರ್ಕಾರಿ ಪದವಿ ಕಾಲೇಜು ಆವರಣದಿಂದ ಹೊರಟ ರ್ಯಾಲಿ ಬೆಂಗಳೂರು–ಮೈಸೂರು ಹೆದ್ದಾರಿ ಮುಖೇನ ಎಪಿಎಂಸಿ ಮಾರ್ಗವಾಗಿ ಸಂಚರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿತು. ರ್ಯಾಲಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಡಾ.ಶಶಿಕಿರಣ್ ಮತ್ತು ಕಾಲೇಜಿನ ಪ್ರಾಂಶುಪಾಲರಾದ ಕ್ಯಾಪ್ಟನ್ ಲಕ್ಷ್ಮಿ ಚಾಲನೆ ನೀಡಿದರು.

ರೋಟರಿ ಸಿಲ್ಕ್ ಸಿಟಿ ಕಾರ್ಯದರ್ಶಿ ಪರಮೇಶ್ ಮತ್ತು ಪದಾಧಿಕಾರಿಗಳು, ದೈಹಿಕ ಶಿಕ್ಷಣ ನಿರ್ದೇಶಕ ಶಿವಕುಮಾರ್, ಕಾಲೇಜಿನ ಪ್ರಾಧ್ಯಾಪಕ ಮುಜೀಬ್, ಬೆಳ್ಳಿ ರಕ್ತ ಕೇಂದ್ರದ ವಿನೋದ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.