ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ದುರುದ್ದೇಶದ ಹೋರಾಟ: ಪರಮೇಶ್ವರ

ಶ್ರೀಕಾಂತ ಪೂಜಾರಿ 16 ಪ್ರಕರಣಗಳಲ್ಲಿ ಭಾಗಿ: ಗೃಹ ಸಚಿವ
Published 5 ಜನವರಿ 2024, 23:41 IST
Last Updated 5 ಜನವರಿ 2024, 23:41 IST
ಅಕ್ಷರ ಗಾತ್ರ

ರಾಮನಗರ (ಮಾಗಡಿ): ‘ಶ್ರೀಕಾಂತ ಪೂಜಾರಿ 16 ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಆ ಬಗ್ಗೆ ದಾಖಲೆ ಇದೆ. ಕೆಲ ಪ್ರಕರಣಗಳಲ್ಲಿ ಖುಲಾಸೆಯಾಗಿದ್ದಾನೆ. ಅಂತಹ ವ್ಯಕ್ತಿಗಾಗಿ ನೀವು ಹೋರಾಟ ಮಾಡುತ್ತಿದ್ದೀರಿ. ಅವನೊಬ್ಬನೇ ಹಿಂದೂನಾ? ಬೇರೆ ಹಿಂದೂಗಳೂ‌ ಇದ್ದಾರೆ. ಅವರು ನಿಮ್ಮ‌‌ ಕಣ್ಣಿಗೆ ಕಾಣುತ್ತಿಲ್ಲವೇ? ಪೂಜಾರಿ ಪರವಾಗಿ ನಡೆಯುತ್ತಿರುವ ಹೋರಾಟದ ಹಿಂದೆ ರಾಜಕೀಯ ದುರುದ್ದೇಶವಿದೆ’ ಎಂದು ಬಿಜೆಪಿ ವಿರುದ್ಧ ಗೃಹ ಸಚಿವ ಜಿ.ಪರಮೇಶ್ವರ ವಾಗ್ದಾಳಿ ನಡೆಸಿದರು.

ಪಟ್ಟಣದಲ್ಲಿ ಶುಕ್ರವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಹಾಗೂ ಅಂಬೇಡ್ಕರ್ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

‘ನಾವು ರಾಮಭಕ್ತರು. ನಮ್ಮನ್ನೂ ಬಂಧನ ಮಾಡಿ ಎನ್ನುತ್ತಿರುವ ಬಿಜೆಪಿ ನಾಯಕರ ಮೇಲೆ ಕೇಸ್ ಇದ್ದರೆ ಪೊಲೀಸರು ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತಾರೆ. ಅವರನ್ನೇನು ಬಿಟ್ಟು ಬಿಡೋದಿಲ್ಲ. ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಆರ್.ಅಶೋಕ ಅವರಿಗೂ ಒಂದೇ ಕಾನೂನು, ಪರಮೇಶ್ವರಗೂ ಒಂದೇ ಕಾನೂನು. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗುತ್ತದೆ’ ಎಂದರು.

‘ರಾಮಮಂದಿರ ಉದ್ಘಾಟನೆ ದಿನ ರಜೆ ಘೋಷಣೆ ಕುರಿತು ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಬೇಕು’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಕಾರ್ಯಕ್ರಮದ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿದ್ದ ದಲಿತ ಸಂಘಟನೆಗಳ ಕಾರ್ಯಕರ್ತರು, ‘ಮುಂದಿನ ಸಿ.ಎಂ ಪರಮೇಶ್ವರ’ ಎಂದು ಘೋಷಣೆ ಕೂಗಿದರು. ಮೈಕ್ ಕಿತ್ತುಕೊಂಡು
ಸುಮ್ಮನಾಗಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT