ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನಕಪುರ: ಹಲವರಿಗೆ ಹೋಂ ಕ್ವಾರಂಟೈನ್‌ ಮುಂದುವರಿಕೆ

Last Updated 30 ಮಾರ್ಚ್ 2020, 13:58 IST
ಅಕ್ಷರ ಗಾತ್ರ

ಕನಕಪುರ: ವಿದೇಶದಿಂದ ತಾಲ್ಲೂಕಿಗೆ ವಾಪಸಾಗಿ ಹೋಂ ಕ್ವಾರಂಟೈನ್‌ನಲ್ಲಿದ್ದವರ 14 ದಿನದ ಅವಧಿ ಮುಗಿದಿದ್ದು ಯಾರಲ್ಲೂ ಕೋವಿಡ್‌ 19 ಸೋಂಕು ಇಲ್ಲ. ಆದರೂ ಅವರು ಮುಂದಿನ 14 ದಿನದವರೆಗೆ ಮನೆಯಲ್ಲೇ ಉಳಿಯುವಂತೆ ಸೂಚನೆ ನೀಡಿರುವುದಾಗಿ ತಾಲ್ಲೂಕು ಆರೋಗ್ಯಾಧಿಕಾಡಿ ಡಾ.ಭುಜಬಲಿ ತಿಳಿಸಿದರು.

ಕೊರೊನಾ ವೈರಸ್‌ ತಡೆ ಸಂಬಂಧ ಮಿನಿ ವಿಧಾನಸೌಧದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್‌ ವರ್ಷಾ ಒಡೆಯರ್‌ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಇಲಾಖೆ ವೈದ್ಯಾಧಿಕಾರಿಗಳ ಸಭೆಯಲ್ಲಿ ಅವರು ಮಾಹಿತಿ ನೀಡಿದರು.

ತಾಲ್ಲೂಕಿನಲ್ಲಿ ಈವರೆಗೂ ಯಾವುದೇ ಸೋಂಕಿತರಾಗಲಿ, ಶಂಕಿತರಾಗಲಿ ಪತ್ತೆಯಾಗಿಲ್ಲ. ಆರೋಗ್ಯ ಇಲಾಖೆ ತಾಲ್ಲೂಕು ಆಡಳಿತದೊಂದಿಗೆ ರೋಗ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಸಭೆಗೆ ತಿಳಿಸಿದರು.

ರೋಗ ತಡೆಗಟ್ಟುವ ಸಂಬಂಧ ಇಲಾಖೆ 24 ಗಂಟೆ ಕಾರ್ಯ ನಿರ್ವಹಿಸುತ್ತಿದೆ. ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ನಿರಂತವಾಗಿ ಕಾರ್ಯ ನಿರ್ವಹಿಸುತ್ತಿದ್ದು ಹಲವು ಅಗತ್ಯ ಸಹಕಾರ, ಮಾಸ್ಕ್‌ ಮತ್ತು ಸ್ಯಾನಿಟೈಸರ್‌ ಬೇಕಿದೆ ಎಂದು ಮನವಿ ಮಾಡಿದರು

ಇಒ ಟಿ.ಎಸ್‌.ಶಿವರಾಮ್‌, ಐಪಿಪಿ ಆಸ್ಪತ್ರೆ ಆಡಳಿತಾಧಿಕಾರಿ ಡಾ.ವಾಸು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ನಲ್ಲಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಕೋವಿಡ್‌-19ನಿಂದ ಮೃತಪಟ್ಟಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿತ್ತು. ಈ ಕುರಿತು ಸ್ಪಷ್ಟನೆ ನೀಡಿದ ದೊಡ್ಡಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಚ್ಚಿದಾನಂದ ಹೃದಯಾಘಾತ ಪ್ರಕರಣಎಂದು ತಿಳಿಸಿದರು.

ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದುಐಪಿಪಿ ಆಸ್ಪತ್ರೆ ಆಡಳಿತಾಧಿಕಾರಿ ಡಾ.ವಾಸು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT