ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಮನಗರ: ಹೋಮ್‌ ಕ್ವಾರಂಟೈನ್‌, ಗಂಟೆಗೊಂದು ಸೆಲ್ಫಿ ಕಡ್ಡಾಯ

ಸರ್ಕಾರದಿಂದ ವಿಶೇಷ ಮೊಬೈಲ್ ಅಪ್ಲಿಕೇಶನ್‌ ಬಿಡುಗಡೆ: ನಿಯಮ ಮೀರಿದರೆ ಕ್ರಮದ ಎಚ್ಚರಿಕೆ
Last Updated 3 ಏಪ್ರಿಲ್ 2020, 14:45 IST
ಅಕ್ಷರ ಗಾತ್ರ

ರಾಮನಗರ: ಕೊರೊನಾ ವೈರಸ್‌ ಹಾವಳಿಯಿಂದಾಗಿ 14 ದಿನಗಳ ಕಾಲ ಹೋಮ್‌ ಕ್ವಾರಂಟೈನ್‌ನಲ್ಲಿ ಇರುವವರು ಮೊಬೈಲ್‌ನಲ್ಲಿ ಗಂಟೆಗೊಂದು ಸೆಲ್ಫಿ ತೆಗೆದು ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ.

ಈ ಬಗ್ಗೆ ರಾಮನಗರ ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ ಆದೇಶ ಹೊರಡಿಸಿದ್ದಾರೆ. ಗೃಹ ನಿರ್ಬಂಧನ ಅರ್ಥಾತ್‌ ಕ್ವಾರಂಟೈನ್‌ನಲ್ಲಿ ಇರುವವರು ಕಡ್ಡಾಯವಾಗಿ ಪ್ರತಿ ಗಂಟೆಗೆ ಒಮ್ಮೆ ಸೆಲ್ಫಿ ತೆಗೆದು ಅದನ್ನು ಮೊಬೈಲ್ ಆ್ಯ‍ಪ್‌ನಲ್ಲಿ ಅಪ್‌ಲೋಡ್‌ ಮಾಡಬೇಕು. ರಾತ್ರಿ 9 ರಿಂದ ಬೆಳಿಗ್ಗೆ 7 ಗಂಟೆಗೆಯವರೆಗಿನ ಅವಧಿಯನ್ನು ನಿದ್ರಾ ಅವಧಿಯೆಂದು ಪರಿಗಣಿಸಿದೆ. ಈ ಅವಧಿಯನ್ನು ಹೊರತುಪಡಿಸಿ ಇನ್ನುಳಿದ ಅವಧಿಯಲ್ಲಿ ಪ್ರತಿ ಗಂಟೆಗೆ ಒಂದರಂತೆ ಒಟ್ಟು 14 ಸೆಲ್ಫಿಗಳನ್ನು ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿರುತ್ತದೆ.

ವಿಶೇಷ ಆಪ್‌: ಕಂದಾಯ ಇಲಾಖೆಯು ಕ್ವಾರಂಟೈನ್‌ನಲ್ಲಿ ಇರುವವರಿಗೆಂದೇ ವಿಶೇಷ ಮೊಬೈಲ್ ಅಪ್ಲಿಕೇಶನ್ ಅನ್ನು ರೂಪಿಸಿದೆ. ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಇದು ಲಭ್ಯವಿದೆ. ಪ್ಲೇ ಸ್ಟೋರ್‌ನಲ್ಲಿqrtnwatch ಎಂದು ಟೈಪಿಸಿದರೆ ಈ ಅಪ್ಲಿಕೇಶನ್‌ ಸಿಗುತ್ತದೆ. ಇದನ್ನು ಡೌನ್‌ಲೋಡ್ ಮಾಡಿಕೊಂಡ ಬಳಿಕ ಕ್ವಾರಂಟೈನ್‌ ನಲ್ಲಿರುವ ವ್ಯಕ್ತಿಗಳು ತಮ್ಮ ಮೊಬೈಲ್‌ ಸಂಖ್ಯೆ ಬಳಸಿಕೊಂಡು ನೋಂದಣಿ ಮಾಡಿಕೊಂಡು ಲಾಗಿನ್‌ ಆಗಬೇಕು. ನಂತರದಲ್ಲಿ ಹಗಲು ಹೊತ್ತಿನಲ್ಲಿ ಗಂಟೆಗೊಮ್ಮೆ ತಮ್ಮ ಚಟುವಟಿಕೆಗಳನ್ನು ದಾಖಲಿಸುತ್ತಾ ಹೋಗಬೇಕಾಗುತ್ತದೆ. ಇದರಿಂದ ಕ್ವಾರಂಟೈನ್‌ನಲ್ಲಿ ಇರುವವವರು ಮನೆಯಲ್ಲೇ ಇದ್ದಾರೆ ಎಂದು ಅಧಿಕಾರಿಗಳಿಗೆ ಖಾತ್ರಿಯಾಗಲಿದೆ.

ಕ್ವಾರಂಟೈನ್‌ನಲ್ಲಿ ಇರುವವರು ನಿಯಮ ಮೀರಿ ಹೊರಗೆ ಓಡಾಡುವ ಸಂಗತಿ ಈಚೆಗೆ ಹೆಚ್ಚು ವರದಿ ಆಗುತಿತ್ತು. ಚನ್ನಪಟ್ಟಣದಲ್ಲೂ ಇದೇ ರೀತಿ ಯುವಕನೊಬ್ಬ ಬೀದಿಯಲ್ಲಿ ಓಡಾಡಿದ್ದು, ಆತನ ವಿರುದ್ಧ ಪೊಲೀಸರು ಪ್ರಕಟಣ ದಾಖಲಿಸಿದ್ದರು. ಇಂತಹ ಚಟುವಟಿಕೆಗಳನ್ನು ತಪ್ಪಿಸುವ ಸಲುವಾಗಿ ಸರ್ಕಾರ ಈ ನಿಯಮವನ್ನು ಕಡ್ಡಾಯ ಮಾಡಿದೆ. ಇದರಿಂದಾಗಿ ಅಂತಹ ವ್ಯಕ್ತಿಗಳ ಓಡಾಟದ ಮೇಲೆ ನಿಗಾ ವಹಿಸುವುದು ಸಾಧ್ಯ ಆಗಲಿದೆ. ಒಂದು ವೇಳೆ ಸೆಲ್ಫಿ ತೆಗೆದು ಅಪ್‌ಲೋಡ್ ಮಾಡದೇ ಹೋದಲ್ಲಿ ಅದನ್ನು ಲೋಪ ಎಂದು ಪರಿಗಣಿಸಿ ಅಂತಹವರನ್ನು ಗೃಹ ನಿರ್ಬಂಧನದಿಂದ ತೆಗೆದು ಸಮೂಹ ನಿರ್ಬಂಧನಕ್ಕೆ ಒಳಪಡಿಸುವುದಾಗಿ ಅಧಿಕಾರಿಗಳು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT