ಸೋಮವಾರ, ಆಗಸ್ಟ್ 15, 2022
22 °C
ಜೆಡಿಎಸ್‌ನಿಂದ ಆಹಾರ ಕಿಟ್ ವಿತರಣೆ

ಆಶಾ ಸಿಬ್ಬಂದಿಗೆ ಗೌರವಧನ ಹೆಚ್ಚಿಸಿ: ಶಾಸಕಿ ಅನಿತಾ ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಗೌರವ ಧನವನ್ನು ಹೆಚ್ಚಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಭರವಸೆ ನೀಡಿದರು.

ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಜೆಡಿಎಸ್‌ ವತಿಯಿಂದ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು, ವಿವಿಧ ಇಲಾಖೆಯ ಡಿ ಗ್ರೂಪ್ ನೌಕರರಿಗೆ ದಿನಸಿ ಕಿಟ್ ಮತ್ತು ವೇಪೋರೈಸರ್ ವಿತರಿಸಿ ಮಾತನಾಡಿದರು.

ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಮುಂದೆ ಮೂರನೇ ಅಲೆ ಬರುವ ಅಪಾಯ ಇದೆ. ಅಷ್ಟರೊಳಗೆ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ಸಿಗಬೇಕು ಎಂಬುದು ತಮ್ಮ ಆಶಯ. ಈ ನಿಟ್ಟಿನಲ್ಲಿ ಮುಂದಿನ ವಾರದಿಂದ ರಾಮನಗರ ತಾಲ್ಲೂಕಿನಲ್ಲಿ ಕೋವಿಡ್ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು
ತಿಳಿಸಿದರು.

ಜೆಡಿಎಸ್ ಮುಖಂಡ ರಾಜಶೇಖರ್, ಬಿ. ಉಮೇಶ್, ಗೂಳಿ ಗೌಡ, ಜಯಕುಮಾರ್, ಮಾವಿನ ಸಸಿ ವೆಂಕಟೇಶ್, ಕೃಷ್ಣ, ಪಾಂಡುರಂಗ, ದೊರೆಸ್ವಾಮಿ
ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು