ಚನ್ನಪಟ್ಟಣ: ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘಕ್ಕೆ (ಹಾಪ್ಕಾಮ್ಸ್, ಲಾಲ್ಬಾಗ್, ಬೆಂಗಳೂರು) ಅಧ್ಯಕ್ಷ ಸ್ಥಾನವನ್ನು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಈ ಬಾರಿ ಪರಿಶಿಷ್ಟ ಜಾತಿಗೆ ಮೀಸಲಾತಿ ನೀಡುವಂತೆ ಸಹಕಾರ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಜಿ.ರಂಗನಾಥ ಸಹಕಾರ ಸಂಘಗಳ ನಿಬಂಧಕರಿಗೆ ಪತ್ರ ಬರೆದಿದ್ದಾರೆ.

ಸಂಘ ಸ್ಥಾಪನೆಯಾದ 1959ರಿಂದ 2026ರವರೆಗೆ ಅಂದರೆ ಸುಮಾರು 67 ವರ್ಷಗಳ ಕಾಲ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಮಾತ್ರ ಅಧ್ಯಕ್ಷರಾಗಿ ಆಡಳಿತ ನಡೆಸಿದ್ದಾರೆ. ಈ ಬಾರಿ ಸಾಮಾಜಿಕ ನ್ಯಾಯದ ಅನ್ವಯ ಪರಿಶಿಷ್ಟ ಜಾತಿ ಅಭ್ಯರ್ಥಿಗೆ ಅಧ್ಯಕ್ಷ ಸ್ಥಾನಕ್ಕೆ ಅವಕಾಶ ನೀಡಬೇಕೆಂದು ಜಿಲ್ಲೆಯ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಆಯ್ಕೆಯಾದ ಕಾಂಗ್ರೆಸ್ ಬೆಂಬಲಿತ ಬಿ.ಪಿ.ಬೈರಯ್ಯ ಅವರು ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ಪರಿಶೀಲಿಸಿದ ಬಳಿಕವೇ ರಂಗನಾಥ ಅವರು ಈ ಪತ್ರ ಬರೆದಿದ್ದಾರೆ.

ಪತ್ರದ ಆಧಾರದ ಮೇಲೆ ಸಹಕಾರ ಸಂಘಗಳ ನಿಬಂಧಕರು ಹಾಪ್ ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದ್ದು, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ಹಾಗೂ ಕರ್ನಾಟಕ ಸಹಕಾರ ಸಂಘಗಳ ನಿಯಮಾವಳಿ 1960 ರನ್ವಯ ಬಿ.ಪಿ.ಬೈರಯ್ಯ ಅವರ ಮನವಿಯಲ್ಲಿನ ಅಂಶಗಳನ್ನು ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳುವಂತೆ ಮತ್ತು ಕೈಗೊಂಡ ಕ್ರಮದ ಬಗ್ಗೆ ಅರ್ಜಿದಾರರಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-14-176616023

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.