ರಾಮನಗರ: ಪತಿಯೊಬ್ಬ ತನ್ನ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕಾಗಿ ಪತ್ನಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಕಗ್ಗಲೀಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಬೆಂಗಳೂರು ದಕ್ಷಿಣ ತಾಲ್ಲೂಕಿನ ಕುಳ್ಳೇಗೌಡನಪಾಳ್ಯದ ಸಿಂಚನ (23) ಕೊಲೆಯಾದವರು. ಆರೋಪಿ ಪತಿ ರೇಣುಕಯ್ಯ ಕೃತ್ಯದ ಬಳಿಕ ತಲೆ ಮರೆಸಿಕೊಂಡಿದ್ದಾನೆ.

ಎರಡು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಸಿಂಚನ ಮತ್ತು ರೇಣುಕಯ್ಯ ದಂಪತಿಗೆ ಒಂದು ವರ್ಷದ ಮಗು ಸಹ ಇತ್ತು. ಕೂಲಿ ಕೆಲಸ ಮಾಡುತ್ತಿದ್ದ ರೇಣುಕಯ್ಯ ಬೇರೆ ಸ್ತ್ರೀ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಇದೇ ವಿಷಯಕ್ಕೆ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದರು.

ಸಂಜೆ 5 ಗಂಟೆ ಸುಮಾರಿಗೆ ರೇಣುಕಯ್ಯ ಕೆಲಸ ಮುಗಿಸಿಕೊಂಡು ಮನೆಗೆ ಬಂದಾಗ, ಇದೇ ವಿಷಯಕ್ಕೆ ಮತ್ತೆ ದಂಪತಿ ನಡುವೆ ಜಗಳ ಶುರುವಾಗಿದೆ. ಆಗ ಕೋಪಗೊಂಡ ರೇಣುಕಯ್ಯ ಮನೆ ಮುಂದೆಯೇ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಕೆಳಕ್ಕೆ ಬಿದ್ದ ಅವರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದರು.

ಕೃತ್ಯದ ನಂತರ ರೇಣುಕಯ್ಯ ತಲೆಮರೆಸಿಕೊಂಡಿದ್ದಾನೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.