ಶುಕ್ರವಾರ, ಮೇ 14, 2021
27 °C

ಬಿಜೆಪಿ ತಂತ್ರಗಾರಿಕೆ ಏನು ಗೊತ್ತಿಲ್ಲ: ಡಿ.ಕೆ. ಸುರೇಶ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಜಿಲ್ಲೆಯ ರಾಮನಗರ ಹಾಗೂ ಚನ್ನಪಟ್ಟಣ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ತಲಾ 22 ವಾರ್ಡುಗಳಲ್ಲಷ್ಟೇ ಸ್ಪರ್ಧೆ ಮಾಡಿದ್ದು, ಅವರ ತಂತ್ರಗಾರಿಕೆ ಏನೆಂಬುದು ಗೊತ್ತಿಲ್ಲ ಎಂದು ಸಂಸದ ಡಿ.ಕೆ. ಸುರೇಶ್‌ ಹೇಳಿದರು.

ವಡ್ಡರಹಳ್ಳಿಯಲ್ಲಿ ಭಾನುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಕಾಂಗ್ರೆಸ್ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಸೋಮವಾರ ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದ್ದು, ಕಾದು ನೋಡೋಣ. ಕೋವಿಡ್ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಕಾನೂನುಗಳನ್ನು ಪಾಲನೆ ಮಾಡುತ್ತಾ ಚುನಾವಣಾ ಪ್ರಚಾರ ಮಾಡುತ್ತೇವೆ’ ಎಂದರು.

ಜಿಲ್ಲೆಯಲ್ಲಿ ತೆರೆದಿರುವ ಕೊರೊನಾ ಕ್ವಾರಂಟೈನ್‌ ಕೇಂದ್ರಗಳಲ್ಲಿ ಸರಿಯಾದ ಸೌಕರ್ಯ ಇಲ್ಲದಿರುವ ದೂರುಗಳು ಬಂದಿವೆ. ಉಸ್ತುವಾರಿ ಮಂತ್ರಿಗಳು ಬರೀ ಸುಳ್ಳು ಹೇಳುತ್ತಿದ್ದಾರೆ. ಅವರ ಬಗ್ಗೆ ವಿಶ್ವಾಸವಿಲ್ಲ. ಜಿಲ್ಲಾಧಿಕಾರಿಯಾದರೂ ಕ್ರಮ ಕೈಗೊಂಡು ಈ ಕೇಂದ್ರಗಳಿಗೆ ಮೂಲಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು