ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಳಪೆ ಕಾಮಗಾರಿಯಾದರೆ ಗುತ್ತಿಗೆದಾರ ಬ್ಲಾಕ್ ಲಿಸ್ಟ್‌ಗೆ

Published 5 ಸೆಪ್ಟೆಂಬರ್ 2024, 14:32 IST
Last Updated 5 ಸೆಪ್ಟೆಂಬರ್ 2024, 14:32 IST
ಅಕ್ಷರ ಗಾತ್ರ

ಕುದೂರು: ಜೆಜೆಎಂ ಯೋಜನೆಯ ಕಳಪೆ ಕಾಮಗಾರಿಗೆ ಕಾರಣರಾಗುವ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸುವಂತೆ ಶಾಸಕ ಎಚ್.ಸಿ.ಬಾಲಕೃಷ್ಣ ಜಿ.ಪಂ. ಎಇಇ ಶ್ರೀನಿವಾಸ್ ಅವರಿಗೆ ಸೂಚಿಸಿದರು.

ಹೋಬಳಿಯ ಕಣ್ಣೂರು ಗೇಟ್ ಬಳಿ ಓವರ್ ಹೆಡ್ ಟ್ಯಾಂಕ್ ಉದ್ಘಾಟಿಸಲು ಆಗಮಿಸಿದ ಶಾಸಕ ಎಚ್.ಸಿ. ಬಾಲಕೃಷ್ಣ ಅವರಿಗೆ ಜಲಜೀವನ್ ಮಿಷನ್ ಯೋಜನೆ ಬಗ್ಗೆ ನಾಗರಿಕರು ದೂರು ನೀಡಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಜೆಜೆಎಂ ಯೋಜನೆಯ ಕಾಮಗಾರಿ ಕಳಪೆಯಾಗಿದೆ. ಸಂಪೂರ್ಣ ಕಾಮಗಾರಿಗಳಿಗೆ ಬಿಲ್ ಪಾವತಿಸಲಾಗಿದೆ. ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರನ್ನು ಕರೆಸಿ 15 ದಿನದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿ ಎಂದು ಎಇಇ ಶ್ರೀನಿವಾಸ್ ಅವರನ್ನು ತರಾಟೆಗೆ ತೆಗೆದುಕೊಂಡರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಜೆಜೆಎಂ ಯೋಜನೆ, ಗ್ರಾಮೀಣ ಭಾಗದ ಜನರ ಮನೆಮನೆಗೆ ಶುದ್ಧ ಕುಡಿಯುವ ನೀರು ಒದಗಿಸಲು ಅನುಕೂಲ ಕಲ್ಪಿಸುವ ಯೋಜನೆ. ಅದರೆ ಕಾಮಗಾರಿ ನಡೆಸಲು ಟೆಂಡರ್ ಪಡೆದ ಗುತ್ತಿಗೆದಾರರು, ಕೆಲವೆಡೆ ಕಾಮಗಾರಿ ಕೈಗೆತ್ತಿಕೊಳ್ಳದೆ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ನೋಟೀಸ್ ನೀಡಿದರೂ ಕಾಮಗಾರಿ ಆರಂಭಿಸಿಲ್ಲ. ಇಂತಹ ನಿರ್ಲಕ್ಷ್ಯ ಧೋರಣೆ ಅನುಸರಿಸುವ ಗುತ್ತಿಗೆದಾರರ ಟೆಂಡರ್ ರದ್ದು ಪಡಿಸಿ, ಮರು ಟೆಂಡರ್ ಕರೆದು ಕಾಮಗಾರಿ ಪೂರ್ಣಗೊಳಿಸಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಇಲ್ಲದಿದ್ದರೆ ಗುತ್ತಿಗೆದಾರರು ಮತ್ತು ಎಂಜಿನಿಯರ್ ವಿರುದ್ದ ಶಿಸ್ತು ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯುವುದಾಗಿ ಎಚ್ಚರಿಕೆ ನೀಡಿದರು.

ಕಳೆದ ಬಾರಿ ಮಳೆಯ ಕೊರತೆಯಿಂದ ಕುಡಿಯುವ ನೀರಿಗೆ ತುಂಬಾ ಅಭಾವ ಉಂಟಾಗಿತ್ತು. ಈ ಬಾರಿ ಉತ್ತಮ ಮಳೆಯಾಗುತ್ತಿದೆ. ನೀರಿನ ಸಮಸ್ಯೆ ಕಂಡುಬರುತ್ತಿಲ್ಲ. ಮಳೆ ಕೈಕೊಟ್ಟರೆ ಕುಡಿಯುವ ನೀರಿಗೆ ಆಹಾಕಾರ ಉಂಟಾಗುತ್ತದೆ. ಜೆಜೆಎಂ ಕುಡಿಯುವ ನೀರಿನ ಯೋಜನೆ ಸಂಪೂರ್ಣವಾಗಿ ಅನುಷ್ಠಾನಗೊಂಡರೆ, ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗುವುದಿಲ್ಲ. ಆಯಾ ಗ್ರಾ.ಪಂ.ಗಳ ಅಧ್ಯಕ್ಷರು, ಪಿಡಿಒಗಳು ಯೋಜನೆಯ ಕಾಮಗಾರಿ ಕಳಪೆಯಾಗದಂತೆ ಎಚ್ಚೆತ್ತುಕೊಂಡು ಕಾಮಗಾರಿಗಳನ್ನು ಗುಣಮಟ್ಟದಿಂದ ಮಾಡಿಸುವಂತೆ ಮನವಿ ಮಾಡಿದರು.

ಕಣ್ಣೂರು ಗ್ರಾ.ಪಂ.ಅಧ್ಯಕ್ಷೆ ಮಹದೇವಮ್ಮ ಪುಟ್ಟರಾಜು, ಮಾಜಿ ಅಧ್ಯಕ್ಷ ಜಗದೀಶ್, ಕಣ್ಣೂರು ಜಯಶಂಕರ್, ಲೋಕನಾಥ್ ಸಿಂಗ್, ಹುಲಿಕಲ್ ವಿಎಸ್ಎಸ್ಎನ್ ಅಧ್ಯಕ್ಷ ದೇವರಾಜು, ತ್ಯಾಗರಾಜು, ನಾಗನಹಳ್ಳಿ ಪಾಲನೇತ್ರ, ಪ್ರಭುದೇವರು, ಹೊನ್ನಪ್ಪ, ಚಂದ್ರಶೇಖರ್, ರಂಗಸ್ವಾಮಿ, ಪಿಡಿಒ ಕಾಂತರಾಜು, ಸಿದ್ದಲಿಂಗಪ್ಪ, ಕುದೂರು ಬಾಲರಾಜು, ಅಕ್ಷರ ದಾಸೋಹ ಸಹಾಯಕ ನಿರ್ದೆಶಕ ಗಂಗಾಧರ್, ಜಿ.ಪಂ.ಎಇಇ ಶ್ರೀನಿವಾಸ್ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT