ಬಿಟ್ ಕಾಯಿನ್ ಬಗ್ಗೆ ದಾಖಲೆ ಇದ್ದರೆ ಕೊಡಿ: ಅಶ್ವತ್ಥನಾರಾಯಣ ಸವಾಲು

ರಾಮನಗರ: ಬಿಟ್ ಕಾಯಿನ್ ವಿಚಾರದಲ್ಲಿ ರಾಜ್ಯ ಸರ್ಕಾರ ಎಲ್ಲ ರೀತಿಯ ತನಿಖೆಗೆ ಸಿದ್ಧವಿದೆ. ವಿರೋಧ ಪಕ್ಷಗಳು ಅಗತ್ಯ ದಾಖಲೆ ಇದ್ದರೆ ಒದಗಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
ಮಾಗಡಿಯಲ್ಲಿ ಗುರುವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಮುಖ್ಯಮಂತ್ರಿ ಬೊಮ್ಮಾಯಿ ರಾಜ್ಯದ ಪ್ರತಿನಿಧಿಯಾಗಿ ಪ್ರಧಾನಿ ಅವರನ್ನು ಭೇಟಿ ಮಾಡಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಸುದ್ದಿ ಎಲ್ಲವೂ ಬರೀ ಊಹಾಪೋಹ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಪ್ರತಿಪಕ್ಷದ ಹಲವು ನಾಯಕರ ಮೇಲೂ ಆರೋಪಗಳಿವೆ. ಹಿಂದಿನ ಸರ್ಕಾರದಲ್ಲಿ ತನಿಖೆಗಳು ಹೇಗೆ ನಡೆದವು ಎಂಬುದು ಗೊತ್ತಿದೆ. ಪ್ರತಿಪಕ್ಷದವರಿಗೆ ಕನ್ನಡಿ ಹಿಡಿಯುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ತಿರುಗೇಟು ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.