ರಾಮನಗರ: ಆದಾಯಕ್ಕಿಂತ ಶೇ 141ರಷ್ಟು ಹೆಚ್ಚು ಆಸ್ತಿ ಹೊಂದಿ ರುವ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಇಲ್ಲಿನ ಉಪ ವಿಭಾಗಾಧಿಕಾರಿ ಸಿ. ಮಂಜು ನಾಥ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಮಂಜುನಾಥ್ ₹4.69 ಕೋಟಿ ಮೊತ್ತದ ಸ್ಥಿರಾಸ್ತಿ ಮತ್ತು ಚರಾಸ್ತಿ ಹೊಂದಿದ್ದು, ₹71 ಲಕ್ಷ ಖರ್ಚು ಮಾಡಿದ್ದಾರೆ. ಅವರ ಒಟ್ಟು ಆದಾಯ ₹2.23 ಕೋಟಿ ಇದ್ದು, ಆದಾಯಕ್ಕಿಂತ ₹3.17 ಕೋಟಿ ಮೊತ್ತದ ಅಧಿಕ ಆಸ್ತಿ ಹೊಂದಿದ್ದಾರೆ. ಶೇ 141.90ರಷ್ಟು ಅಧಿಕ ಆಸ್ತಿ ಅಕ್ರಮವಾಗಿ ಗಳಿಸಿದ್ದಾರೆ ಎಂದು ಎಸಿಬಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದರು. ಈ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆ
ಯಲ್ಲಿ ಸರ್ಕಾರ ಇದೇ 17ರಂದು ಮಂಜು ನಾಥ್ ಅವರನ್ನು ಸೇವೆಯಿಂದ ಅಮಾ ನತುಗೊಳಿಸಿ ಆದೇಶ ಹೊರಡಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.