ಬಿಜೆಪಿಯಿಂದ ಕಳಂಕರಹಿತ ಅಭಿವೃದ್ಧಿ: ನಾಗರಾಜು

ಮಂಗಳವಾರ, ಏಪ್ರಿಲ್ 23, 2019
25 °C

ಬಿಜೆಪಿಯಿಂದ ಕಳಂಕರಹಿತ ಅಭಿವೃದ್ಧಿ: ನಾಗರಾಜು

Published:
Updated:
Prajavani

ಹಾರೋಹಳ್ಳಿ (ಕನಕಪುರ): ‘ದೇಶವನ್ನು ಅಭಿವೃದ್ಧಿಯತ್ತ ಮುನ್ನಡೆಸಿಕೊಂಡು ಹೋಗುತ್ತಿರುವ ನರೇಂದ್ರ ಮೋದಿ ಅವರೇ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ದೇಶದ ಜನರು ಬಯಸಿದ್ದಾರೆ’ ಎಂದು ಬಿಜೆಪಿ ಒಬಿಸಿ ಅಧ್ಯಕ್ಷ ನಾಗರಾಜು ಹೇಳಿದರು.

ಹಾರೋಹಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಪಕ್ಷದ ಮುಖಂಡರೊಂದಿಗೆ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

‘ಅವರು 5 ವರ್ಷಗಳಲ್ಲಿ ಕಳಂಕ ರಹಿತವಾಗಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಇದರಿಂದ ದೇಶದ ಜನರು ಮನ ಗೆದ್ದಿರುವ ಅವರ ವಿರುದ್ಧ ವಿರೋಧಿಗಳು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಮೋದಿ ಕೆಲಸವೇ ಮಾಡಿಲ್ಲವೆಂದು ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವವರು ಅದರಲ್ಲಿ ಕೇಂದ್ರದ ಪಾಲು ಎಷ್ಟಿದೆ ಎಂಬುದನ್ನು ಜನತೆಗೆ ತಿಳಿಸಬೇಕು. ನಮ್ಮ ಪಕ್ಷದವರು ಎಲ್ಲರೂ ಒಟ್ಟಾಗಿ ನರೇಂದ್ರ ಮೋದಿ ನಾಯಕತ್ವದಲ್ಲಿ ಕೆಲಸ ಮಾಡುತ್ತಿದ್ದೇವೆ. ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿ ಆಗುತ್ತಾರೆ’ ಎಂದರು.

‘ರಾಹುಲ್‌ ಗಾಂಧಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಯಾರಿಗೂ ಸಹಮತ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ದೇಶಕ್ಕೆ ಸಮರ್ಥ ಪ್ರಧಾನಿ ಆಗಿರುವ ನರೇಂದ್ರ ಮೋದಿ ಅವರಿಗೆ ನಿಮ್ಮೆಲ್ಲರ ಮತ ನೀಡಿ’ ಎಂದು ಮನವಿ ಮಾಡಿದರು.

ಒಬಿಸಿ ಘಟಕದ ಎಲ್ಲ ಪದಾಧಿಕಾರಿಗಳು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !