ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಡದಿ | ಮುತ್ತಪ್ಪ ರೈ ಪುಣ್ಯಸ್ಮರಣೆ: ರಕ್ತದಾನ ಶಿಬಿರ

Published 16 ಮೇ 2023, 5:45 IST
Last Updated 16 ಮೇ 2023, 5:45 IST
ಅಕ್ಷರ ಗಾತ್ರ

ಬಿಡದಿ (ರಾಮನಗರ): ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಅವರ ಮೂರನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಸೋಮವಾರ ರಕ್ತದಾನ ಶಿಬಿರ ನಡೆಯಿತು.

ಕರಿಯಪ್ಪನದೊಡ್ಡಿ ಸಮೀಪವಿರುವ ಮುತ್ತಪ್ಪ ರೈ ನಿವಾಸದ ಆವರಣದಲ್ಲಿ ಬೆಳ್ಳಿ ರಕ್ತನಿಧಿ ಸಹಯೋಗದೊಂದಿಗೆ ನಡೆದ ಶಿಬಿರದಲ್ಲಿ ಹತ್ತಾರು ಜನರು ರಕ್ತದಾನ ಮಾಡಿದರು. ಸಂಘಟನೆಯ ರಾಜ್ಯ ವಕ್ತಾರ ಪ್ರಕಾಶ್ ರೈ ಮಾತನಾಡಿ, ಮುತ್ತಪ್ಪ ಅವರ ಪುಣ್ಯಸ್ಮರಣೆಯ ದಿನ ಸಮಾಜಕ್ಕೆ ನೆರವಾಗುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಸಂಘಟನೆಯ ರಾಜ್ಯ ಅಧ್ಯಕ್ಷ ಬಿ.ಎನ್. ಜಗದೀಶ್ ಮಾತನಾಡಿ, ಇದೇ 18ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮುತ್ತಪ್ಪ ರೈ ಅವರ ಜೀವನ ಚರಿತ್ರೆ ಕೃತಿ ಬಿಡುಗಡೆ ಆಗಲಿದೆ. ಅತ್ಯಂತ ಕುತೂಹಲಕಾರಿ ವಿಚಾರಗಳು ಈ ಪುಸ್ತಕದಲ್ಲಿವೆ ಎಂದರು.

ಶಿಬಿರದಲ್ಲಿ 40ಕ್ಕೂ ಹೆಚ್ಚು ಮಂದಿ ರಕ್ತದಾನ ಮಾಡಿದರು. ಇದಕ್ಕೂ ಮುನ್ನ ಬಿಡದಿ ಪಟ್ಟಣದಲ್ಲಿ ಮುತ್ತಪ್ಪ ರೈ ಅವರ ಭಾವಚಿತ್ರದ ಮೆರವಣಿಗೆ ನಡೆಯಿತು. ರೈ ದಂಪತಿಯ ಸಮಾಧಿಗೆ ಕಾರ್ಯಕರ್ತರು ಪೂಜೆ ಸಲ್ಲಿಸಿದರು.

ಸಂಘಟನೆಯ ರಾಜ್ಯ ಘಟಕದ ಕಾರ್ಯಾಧ್ಯಕ್ಷ ರಾಮಚಂದ್ರಯ್ಯ, ಉಪಾಧ್ಯಕ್ಷ ಸತೀಶ್‍ಗೌಡ, ಪ್ರಧಾನ ಕಾರ್ಯದರ್ಶಿ ರಜತ್ ಗಗನ್ ರಾಜ್, ರಾಮನಗರ ಜಿಲ್ಲಾ ಅಧ್ಯಕ್ಷ ಕೆ.ರವಿ, ಪದಾಧಿಕಾರಿಗಳಾದ ಯೋಗಾನಂದ್, ಮಂಜುಳಾ, ನಿಸಾ, ವಿಜಯ, ರತ್ನಮ್ಮ, ನಾರಾಯಣಸ್ವಾಮಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT