ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಲಬಾಧೆ: ರೈತ ಆತ್ಮಹತ್ಯೆ

Published : 6 ಆಗಸ್ಟ್ 2024, 7:20 IST
Last Updated : 6 ಆಗಸ್ಟ್ 2024, 7:20 IST
ಫಾಲೋ ಮಾಡಿ
Comments

ಕನಕಪುರ: ಸಾಲಗಾರರ ಒತ್ತಡದಿಂದ ಯುವ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಶೆಟ್ಟಿಕೆರೆದೊಡ್ಡಿ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ಶೆಟ್ಟಿಕೆರೆದೊಡ್ಡಿ ಗ್ರಾಮದ ನಂದೀಶ (35) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇವರಿಗೆ ತಂದೆ ಇಲ್ಲ, ತಾಯಿ ಮಾತ್ರ ಇದ್ದಾರೆ, ಅವಿವಾಹಿತರಾಗಿದ್ದು, ಕುಟುಂಬದ ಜವಾಬ್ದಾರಿಯನ್ನು ಇವರೇ ನೋಡಿಕೊಳ್ಳುತ್ತಿದ್ದರು.

ಕೃಷಿ ಹಾಗೂ ಕುಟುಂಬ ನಿರ್ವಹಣೆಗಾಗಿ ಸುಮಾರು 10 ಲಕ್ಷದಷ್ಟು ಸಾಲ ಮಾಡಿಕೊಂಡಿದ್ದು ಕೃಷಿಯಲ್ಲಿ ಉಂಟಾದ ನಷ್ಟದಿಂದ ಸಾಲವನ್ನು ಮರುಪಾವತಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ್ದರು ಎಂದು ಬಂಧುಗಳು ತಿಳಿಸಿದ್ದಾರೆ.

ಸೋಮವಾರ ಬೆಳಿಗ್ಗೆ ಜಮೀನಿನ ಕಡೆ ಹೋದ ಗ್ರಾಮಸ್ಥರು ಜಮೀನಿನಲ್ಲಿನ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿದ್ದ ನಂದೀಶನನ್ನು ನೋಡಿ ಕುಟುಂಬದವರಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತ ದೇಹವನ್ನು ಕನಕಪುರ ಸಾರ್ವಜನಿಕ ಆಸ್ಪತ್ರೆಗೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ.

ಪೊಲೀಸರು ಮೃತರ ತಾಯಿ ಶಿವಮ್ಮ ನೀಡಿದ ದೂರಿನ ಅನ್ವಯ ಯು.ಡಿ. ಆರ್ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT