ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರೈಲು ನಿಲ್ದಾಣವಲ್ಲ, ವಿಮಾನ ನಿಲ್ದಾಣ’

Published 14 ಮಾರ್ಚ್ 2024, 6:43 IST
Last Updated 14 ಮಾರ್ಚ್ 2024, 6:43 IST
ಅಕ್ಷರ ಗಾತ್ರ

ರಾಮನಗರ: ಇಲ್ಲಿಯ ರೈಲ್ವೆ ನಿಲ್ದಾಣದಲ್ಲಿ ‘ಒಂದು ನಿಲ್ದಾಣ ಒಂದು ಉತ್ಪನ್ನ’ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ  ಮಂಗಳವಾರ ವೀಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.

ಇಲ್ಲಿಯ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಆ.ದೇವೇಗೌಡ ಮಾತನಾಡಿ, ಎನ್‌ಡಿಎ ಸರ್ಕಾರ ಅವಧಿಯಲ್ಲಿ ದೇಶದಲ್ಲಿಯ ರೈಲು ನಿಲ್ದಾಣಗಳು ಸಾಕಷ್ಟು ಅಭಿವೃದ್ಧಿಯಾಗುತ್ತಿವೆ ಎಂದರು.

ವಿಮಾನ ನಿಲ್ದಾಣದ ಮಾದರಿಯಲ್ಲಿ ರೈಲು ನಿಲ್ದಾಣಗಳನ್ನು ಕೇಂದ್ರ ಸರ್ಕಾರ ಅಭಿವೃದ್ಧಿ ಮಾಡುತ್ತಿದೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ದರ್ಶನ್ ರೆಡ್ಡಿ ಹೇಳಿದರು.

ಬಿಜೆಪಿಯ ಎಸ್.ಅರ್.ನಾಗರಾಜು, ಶಿವಾನಂದ, ನಾಗೇಶ್, ಕಿಶನ್ ಗೌಡ, ಮಂಜು, ಕಾಳಯ್ಯ, ರೈಲ್ವೆ ಇಲಾಖೆ ಬೆಂಗಳೂರು ವಿಭಾಗದ ಹಿರಿಯ ಡಿ.ಇ.ಎಂ. ರಿಷಿಕಾ ಶರ್ಮ, ರಾಮನಗರ ರೈಲು ನಿಲ್ದಾಣದ ಸ್ಟೇಷನ್ ಮಾಸ್ಟರ್ ಶ್ರೀಕಂಠಯ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT