ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿರಿಧಾನ್ಯ ಮಾರಾಟ ಮಳಿಗೆ ಉದ್ಘಾಟನೆ

Last Updated 25 ಮೇ 2019, 13:14 IST
ಅಕ್ಷರ ಗಾತ್ರ

ತಿಪ್ಪಸಂದ್ರ(ಮಾಗಡಿ): ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಿರಿಗ್ರಾಮೋದ್ಯೋಗ ಸಂಸ್ಥೆ ಆರಂಭಿಸಿ, ದೇಸಿ ನಿತ್ಯಬಳಕೆಯ= ವಸ್ತುಗಳನ್ನು ಕಡಿಮೆ ದರದಲ್ಲಿ ಮಾರಾಟ ಮಾಡಲಾಗುವುದು ಎಂದು ಯೋಜನಾಧಿಕಾರಿ ಶಶಿಕಲಾ ಸುವರ್ಣ ತಿಳಿಸಿದರು.

ತಿಪ್ಪಸಂದ್ರ ಗ್ರಾಮದಲ್ಲಿ ‘ಸಿರಿಮಾರಾಟ ಮಳಿಗೆ’ ಆರಂಭಿಸಿ ಅವರು ಮಾತನಾಡಿದರು. ಸಂಸ್ಥೆ ವತಿಯಿಂದ ಆರಂಭವಾಗಿರುವ ಮಳಿಗೆಯಲ್ಲಿ ಸ್ತ್ರೀಶಕ್ತಿ ಸಂಘದ ಸದಸ್ಯರು ತಯಾರಿಸಿರುವ ಪರಿಶುದ್ಧ ಗುಣಮಟ್ಟದ ನಿತ್ಯ ಬಳಕೆ ವಸ್ತುಗಳನ್ನು ಕಡಿಮೆ ದರದಲ್ಲಿ ಮಾರಾಟ ಮಾಡಲಾಗುವುದು. ಇದರಿಂದ ಬಂದ ಹಣವನ್ನು ಮಹಿಳೆಯರ ಸಬಲೀಕರಣಕ್ಕೆ ಬಳಸಲಾಗುವುದು ಎಂದರು.

ಗ್ರಾಮ ಪಂಚಾಯಿತಿ ಸದಸ್ಯ ರಘು, ಸ್ತ್ರೀಶಕ್ತಿ ಸಂಘದ ಮೀನಾಕ್ಷಿ, ಗಾಯಿತ್ರಮ್ಮ, ಮೇಲ್ವಿಚಾರಕ ಜಯಣ್ಣ, ಸುರೇಶ್‌, ಮೆಡಿಕಲ್ಸ್‌ ಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT