ಭಾನುವಾರ, ಸೆಪ್ಟೆಂಬರ್ 19, 2021
24 °C

ಗೂಳಿಹಟ್ಟಿಗೆ ಸಚಿವ ಸ್ಥಾನಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸರ್ಕಾರದಲ್ಲಿ ಶಾಸಕ ಗೂಳಿಹಟ್ಟಿ ಶೇಖರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಸಮತಾ ಸೈನಿಕ ದಳದ ರಾಜ್ಯ ಯುವ ಘಟಕದ ಅಧ್ಯಕ್ಷ ಎಂ. ಗೋವಿಂದಯ್ಯ ಒತ್ತಾಯಿಸಿದರು.

ತಾಲ್ಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಗೂಳಿಹಟ್ಟಿ ಶೇಖರ್‌ ಅವರು ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ ಅನುಭವವಿದೆ. ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದು ದಲಿತ ಸಮುದಾಯಗಳಿಂದ ಪ್ರತಿನಿಧಿಸಿರುವ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡಬೇಕೆಂದು ಮನವಿ ಮಾಡಿದರು.

ಬೋವಿ ಸಂಘರ್ಷ ಸಮಿತಿಯ ರಾಮನಗರ ಜಿಲ್ಲಾ ಅಧ್ಯಕ್ಷ ರಾಮಸಾಗರ ಕೃಷ್ಣ, ಕಸ್ತೂರಿ ಕರ್ನಾಟಕ ರಕ್ಷಣಾ ಸೇನೆ ಸಂಸ್ಥಾಪಕ ಅಧ್ಯಕ್ಷ ಆಂಜನಪ್ಪ ಮಾತನಾಡಿ, ಗೂಳಿಹಟ್ಟಿ ಶೇಖರ್‌ ಅವರು ಸಚಿವರಾಗಿದ್ದಾಗ ಎಲ್ಲಾ ಹಿಂದುಳಿದ ವರ್ಗ, ಶೋಷಿತ ಸಮುದಾಯಗಳು, ಬಡವರು, ದೀನ ದಲಿತರ ಪರವಾಗಿ ಕೆಲಸ ಮಾಡಿದ್ದಾರೆ. ದುರ್ಬಲರ ಏಳಿಗೆಗಾಗಿ ಶ್ರಮಿಸಿದ್ದಾರೆ. ಜನಾನುರಾಗಿ ಆಗಿರುವ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೋರಿದರು. ರುದ್ರೇಶ್‌, ಟಿ.ವಿ. ರವಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.