ಗುರುವಾರ , ಮಾರ್ಚ್ 30, 2023
32 °C

ರಸ್ತೆ ದುರಸ್ತಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಿಡದಿ: ಬಾನಂದೂರು–ಬಿಡದಿ ಮಧ್ಯೆ ಹಾದುಹೋಗುವ ಬಸವರಾಜಪ್ಪ ಅವರ ಜಮೀನಿನ ಬಳಿ ಇರುವ ತೊರೆನೆಲ್ಲಿಗುಡ್ಡೆ ಕೆರೆಯ ಕೋಡಿ ಹರಿದಿರುವುದರಿಂದ ರಸ್ತೆ ಕುಸಿದಿದೆ. ಇದರಿಂದ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.

ಈ ಮಾರ್ಗದಲ್ಲಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಜೊತೆಗೆ ಬಾಲಗಂಗಾಧರನಾಥ ಸ್ವಾಮೀಜಿ ಅವರ ಜನ್ಮ ಸ್ಥಳವಾಗಿರುವುದರಿಂದ ಜನರು ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ. ರಸ್ತೆಯಲ್ಲಿ ಗುಂಡಿ ಬಿದ್ದಿರುವುದರಿಂದ ಅಪಘಾತಗಳ ಸಂಖ್ಯೆ
ಹೆಚ್ಚುತ್ತಿದೆ.

‘ಕೂಡಲೇ ಸ್ಥಳೀಯ ಶಾಸಕರು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ದುರಸ್ತಿಗೆ ಕ್ರಮವಹಿಸಬೇಕು’ ಎಂದು ಬಾನಂದೂರು ಗ್ರಾಮಸ್ಥ ಬಿ.ಎಂ. ಸತೀಶ್ ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.