ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆ: ಪ್ರಥಮ ಸ್ಥಾನ

Last Updated 30 ಡಿಸೆಂಬರ್ 2019, 14:42 IST
ಅಕ್ಷರ ಗಾತ್ರ

ಚನ್ನಪಟ್ಟಣ: ಶ್ರೀಲಂಕಾದಲ್ಲಿ ನಡೆದ ಅಂತರರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ತಾಲ್ಲೂಕಿನ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಪ್ರಥಮಸ್ಥಾನ ಪಡೆಯುವುದರ ಮೂಲಕ ಕೀರ್ತಿ ತಂದಿದ್ದಾರೆ.

ತಾಲ್ಲೂಕಿನ ಕೋಡಂಬಳ್ಳಿಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕೊಂಡಾಪುರ ಗ್ರಾಮದ ಪೂರ್ಣಿಮಾ ಹಾಗೂ ಪಟ್ಟಣದ ಕೇಂಬ್ರಿಜ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಸುಣ್ಣಘಟ್ಟ ಗ್ರಾಮದ ನಿಖಿಲ್ ಈ ಸಾಧನೆ ಮಾಡಿದ ವಿದ್ಯಾರ್ಥಿಗಳಾಗಿದ್ದಾರೆ. ಕರಾಟೆ ಶಿಕ್ಷಕ ಆನಂದ್ ಅವರ ಮಾರ್ಗದರ್ಶನದಲ್ಲಿ ಈ ಸಾಧನೆ ಮಾಡಿದ್ದಾರೆ.

ಅಂತರ ರಾಷ್ಟ್ರೀಯಮಟ್ಟದಲ್ಲಿ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಆಡಳಿತ ಮಂಡಳಿ ಸದಸ್ಯರು ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT