ಗುರುವಾರ , ಜುಲೈ 29, 2021
23 °C

ಚನ್ನಪಟ್ಟಣ: ವಿವಿಧೆಡೆ ಯೋಗ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಪಟ್ಟಣ: ಪಟ್ಟಣ ಹಾಗೂ ತಾಲ್ಲೂಕಿನ ವಿವಿಧೆಡೆ ಸೋಮವಾರ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಬಿಜೆಪಿಯಿಂದ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪಟ್ಟಣದ ಎಲ್.ಎನ್. ಕಲ್ಯಾಣ ಮಂಟಪದಲ್ಲಿ ನಡೆದ ಯೋಗ ಕಾರ್ಯಕ್ರಮಕ್ಕೆ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಚಾಲನೆ ನೀಡಿದರು.

ನಗರಸಭಾ ಸದಸ್ಯರಾದ ಕೋಟೆ ಚಂದ್ರು, ಮನೋಹರ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ, ಬಿಜೆಪಿ ನಗರ ಘಟಕದ ಅಧ್ಯಕ್ಷ ಶಿವು, ಪ್ರಧಾನ ಕಾರ್ಯದರ್ಶಿಗಳಾದ ಸಿ.ಎಸ್. ಸಂತೋಷ್, ಲಿಂಗೇಗೌಡ, ಕಾರ್ಯದರ್ಶಿ ಕಿರಣ್ ಕುಮಾರ್, ಯುವ ಮೋರ್ಚಾ ಅಧ್ಯಕ್ಷ ಕೋಟೆ ಚೇತನ್, ಮಹಿಳಾ ಮೋರ್ಚಾ ಅಧ್ಯಕ್ಷೆ ಮೈತ್ರಿ ಗೌಡ, ಮುಖಂಡರಾದ ರಾಮಣ್ಣ ಚಕ್ಕೆರೆ, ಕೋಟೆ ಸ್ವಾಮಿ, ಶರತ್, ಗೋಪಿಕೃಷ್ಣ, ಸಂತೋಷ್, ಬಸವರಾಜು, ಸದಾನಂದ ಭಾಗವಹಿಸಿದ್ದರು.

ಪಟ್ಟಣದ ಮಹೇಶ್ವರ ಕಲ್ಯಾಣ ಮಂಟಪದಲ್ಲಿ ಯೋಗ ದಿನಾಚರಣೆ ಪ್ರಯುಕ್ತ ಯೋಗ ಕಾರ್ಯಕ್ರಮ ಆಯೋಜಿಸಲಾಗಿತ್ತು. ಯೋಗ ಶಿಕ್ಷಕಿ ಸೌಭಾಗ್ಯ ಅವರನ್ನು ಸನ್ಮಾನಿಸಲಾಯಿತು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹುಲುವಾಡಿ ದೇವರಾಜು, ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಟಿ. ಜಯರಾಮು, ಜಿಲ್ಲಾ ಉಪಾಧ್ಯಕ್ಷರಾದ ಶಿವಲಿಂಗಯ್ಯ, ರವೀಶ್ ಹಾಜರಿದ್ದರು.

ತಾಲ್ಲೂಕಿನ ಹೊಂಗನೂರು ಅರಸು ಭವನದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ತಾಲ್ಲೂಕಿನ ಹೊಂಗನೂರು, ಕೋಡಂಬಳ್ಳಿ, ಅಕ್ಕೂರು ಭಾಗದ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು