ರಾಮನಗರ: ಡಾ. ಬಿ.ಆರ್. ಅಂಬೇಡ್ಕರ್ ಅಬಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳಿಂದ 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯದವರ ಆರ್ಥಿಕ ಸಬಲೀಕರಣಕ್ಕಾಗಿ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ, ಸ್ವಯಂ ಉದ್ಯೋಗ ಯೋಜನೆ, ಮೈಕ್ರೊ ಕ್ರೆಡಿಟ್ ಯೋಜನೆ ಹಾಗೂ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಗಳಿಗೆ ಆನ್ಲೈನ್ ಮೂಲಕ https://sevasindhu.karnataka.gov.in ನಲ್ಲಿ ನೇರವಾಗಿ ಅಥವಾ ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ನಲ್ಲಿ ಸೆ. 10ರೊಳಗೆ ಅರ್ಜಿ ಸಲ್ಲಿಸಬೇಕು. (2023-24 ಮತ್ತು 2024-25ನೇ ಸಾಲಿನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ).

ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ನಿಗಮದ ವೆಬ್ಸೈಟ್ ಅಥವಾ ಕಲ್ಯಾಣ ಮಿತ್ರ ಸಹಾಯವಾಣಿ ಸಂಖ್ಯೆ: 9482300400 ಸಂಪರ್ಕಿಸಬೇಕು ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.