ಹಾರೋಹಳ್ಳಿ: ತಾಲ್ಲೂಕಿನ ಕೊಳ್ಳಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಚಾಲನೆ ಇಕ್ಬಾಲ್ ಹುಸೇನ್ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕ್ಷೇತ್ರದ ವ್ಯಾಪ್ತಿಯಲ್ಲಿ ಅಂಗನವಾಡಿ, ರಸ್ತೆ, ಚರಂಡಿ ಮತ್ತು ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಹಲವು ವರ್ಷಗಳಿಂದ ಈ ಭಾಗದಲ್ಲಿ ಶಾಲೆ, ಅಂಗನವಾಡಿ ಮತ್ತು ನೀರಾವರಿ ಯೋಜನೆಗಳಿಗೆ ಬೇಡಿಕೆ ಇತ್ತು. ಕೊಳ್ಳಿಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ₹16 ಕೋಟಿ ವೆಚ್ಚದ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ರೈತರ ಜಮೀನುಗಳಿಗೆ ನೀರು ಪೂರೈಕೆಯಾಗುವ ಚಾನಲ್ಗಳ ಅಭಿವೃದ್ಧಿಗೆ ₹5ಕೋಟಿ, ಕಾವೇರಿ ನೀರಾವರಿ ನಿಗಮದಿಂದ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ₹8 ಕೋಟಿ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಮುಖ್ಯಮಂತ್ರಿ ಅನುದಾನದಲ್ಲಿ ₹5 ಕೋಟಿ ಅನುದಾನದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು.

ನಿವೇಶನ ರಹಿತರಿಗೆ ನಿವೇಶನ ನೀಡಲು ಸರ್ಕಾರಿ ಜಾಗ ಗುರುತಿಸುವಂತೆ ತಹಶೀಲ್ದಾರ್ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಮನಗರ ತಾಲ್ಲೂಕಿನಲ್ಲಿ 250 ಎಕರೆ ಮತ್ತು ಹಾರೋಹಳ್ಳಿ ಭಾಗದಲ್ಲಿ 70 ಎಕರೆ ಸರ್ಕಾರಿ ಜಮೀನು ಗುರುತಿಸಲಾಗಿದೆ ಎಂದರು.

ಮರಳವಾಡಿ ಭಾಗದಲ್ಲಿ ಕೆರೆ ತುಂಬಿಸುವ ಯೋಜನೆ ಈಗಾಗಲೇ ಕಾರ್ಯರೂಪಕ್ಕೆ ಬಂದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅನುದಾನದಿಂದ ಕೈಲಾಂಚ ಮತ್ತು ಕಸಬಾದಲ್ಲಿ ₹108 ಕೋಟಿ ವೆಚ್ಚದಲ್ಲಿ 48 ಕೆರೆ ತುಂಬಿಸುವ ಯೋಜನೆಗಳಿಗೆ ಚಾಲನೆ ನೀಡಲಾಗಿದೆ.

ಕ್ಷೇತ್ರದ ವ್ಯಾಪ್ತಿಗೆ ಐದು ಹೈಟೆಕ್ ಶಾಲೆಗಳನ್ನು ಸರ್ಕಾರ ಮಂಜೂರು ಮಾಡಿದೆ. ಅವೆರಹಳ್ಳಿ, ಚೀಲೂರು, ಪಾದರಹಳ್ಳಿ, ಬನವಾಸಿ, ಬನ್ನಿಕುಪ್ಪೆಗೆ ₹12ಕೋಟಿ ವೆಚ್ಚದಲ್ಲಿ ಶಾಲೆಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಕ್ಷೇತ್ರಕ್ಕೆ ಸಚಿವ ಮಧು ಬಂಗಾರಪ್ಪ ಅವರು 5 ಕರ್ನಾಟಕ ಪಬ್ಲಿಕ್ ಶಾಲೆ ನೀಡಿದ್ದಾರೆ ಎಂದರು.

ತಹಶೀಲ್ದಾರ್ ಹರ್ಷವರ್ಧನ್, ಇಒ ಅಪೂರ್ವ ಕುಲಕರ್ಣಿ, ಎ.ಡಿ ಮೋಹನ್ ಬಾಬು, ಬಮೂಲ್ ನಿರ್ದೇಶಕ ಹರೀಶ್ ಕುಮಾರ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ್, ಬಾಲಾಜಿ ಮಂಜೇಗೌಡ, ಸುಶೀಲ್ ಕುಮಾರ್, ಸೊಂಟೇನಳ್ಳಿ ರಾಜು, ದಿನೇಶ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಕಾರ್ಯಕರ್ತತರು ಉಪಸ್ಥಿತರಿದ್ದರು.

ಹಾರೋಹಳ್ಳಿ: ಕ್ಷೇತ್ರದ ವ್ಯಾಪ್ತಿಯ ಅಂಗನವಾಡಿ ರಸ್ತೆ ಚರಂಡಿ ಸೇರಿದಂತೆ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ತಿಳಿಸಿದರು.

ಹಾರೋಹಳ್ಳಿ ತಾಲೂಕಿನ ಕೊಳ್ಳಿಗನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಹಲವಾರು ವರ್ಷಗಳಿಂದ ಈ ಭಾಗದಲ್ಲಿ ಶಾಲೆ ಅಂಗನವಾಡಿ ನೀರಾವರಿ ಯೋಜನೆಗಳಿಗೆ ಬೇಡಿಕೆ ಇದೆ ಒಂದು ಕಡೆ ರಸ್ತೆಗಳು ಸರಿ ಇಲ್ಲ ಕೊಳ್ಳಿಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 16 ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ರೈತರ ಜಮೀನುಗಳಿಗೆ ನೀರು ಪೂರೈಕೆಯಾಗುವ ಚಾನೆಲ್ ಗಳ ಅಭಿವೃದ್ಧಿಗೆ 5 ಕೋಟಿ, ಕಾವೇರಿ ನೀರಾವರಿ ನಿಗಮದಿಂದ ರಸ್ತೆ ಚರಂಡಿ ಕಾಮಗಾರಿಗಳಿಗೆ 8 ಕೋಟಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಮುಖ್ಯಮಂತ್ರಿಗಳ ಅನುದಾನದಲ್ಲಿ 5 ಕೋಟಿ ಸೇರಿದಂತೆ ಒಟ್ಟು 16 ಕೋಟಿ ವೆಚ್ಚದ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಬಹಳ ವರ್ಷಗಳಿಂದ ಈ ಭಾಗದಲ್ಲಿ ನಿವೇಶನ ಕೊಟ್ಟಿಲ್ಲ ಹಾಗಾಗಿ ಬಹಳಷ್ಟು ಜನ ನಿವೇಶನಕ್ಕಾಗಿ ಮನವಿ ಮಾಡಿದ್ದಾರೆ ನಿವೇಶನ ರಹಿತರಿಗೆ ನಿವೇಶನ ನೀಡಲು ಸರ್ಕಾರಿ ಜಾಗ ಗುರುತಿಸುವಂತೆ ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ ರಾಮನಗರ ತಾಲೂಕಿನಲ್ಲಿ ನಿವೇಶನ ಹಂಚಿಕೆ ಮಾಡಲು 250 ಎಕರೆ, ಹಾರೋಹಳ್ಳಿ ಭಾಗದಲ್ಲಿ 70 ಎಕರೆ ಸರ್ಕಾರಿ ಗೋಮಾಳ ಗುರುತಿಸಲಾಗಿದೆ ಬಡವರು ಮತ್ತು ನಿವೇಶನ ರಹಿತರಿಗೆ ಸೂರು ಕಲ್ಪಿಸಿಕೊಡಲು ಇನ್ನಷ್ಟು ಸರ್ಕಾರ ಜಾಗವನ್ನು ಗುರುತಿಸುವಂತೆ ಸೂಚನೆ ನೀಡಿದ್ದೇನೆ ಎಂದರು.

ಮರಳವಾಡಿ ಭಾಗದಲ್ಲಿ ಕೆರೆ ತುಂಬಿಸುವ ಯೋಜನೆ ಈಗಾಗಲೇ ಕಾರ್ಯರೂಪಕ್ಕೆ ಬಂದಿದ್ದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರ ಅನುದಾನ ತಂದು ಕೈಲಾಂಚ ಮತ್ತು ಕಸಬಾದಲ್ಲೂ 108 ಕೋಟಿ ವೆಚ್ಚದಲ್ಲಿ 48 ಕೆರೆ ತುಂಬಿಸುವ ಯೋಜನೆಗಳಿಗೆ ಚಾಲನೆ ಕೊಟ್ಟಿದ್ದೇವೆ.ಕೆಲವು ಶಾಲೆ ದುರಸ್ತಿ ಮತ್ತು ನೂತನ ಕೊಠಡಿಗಳ ನಿರ್ಮಾಣಕ್ಕೆ ಮನವಿ ಮಾಡಿದ್ದಾರೆ. ನನ್ನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಐದು ಹೈಟೆಕ್ ಶಾಲೆಗಳನ್ನು ಸರ್ಕಾರ ಕೊಟ್ಟಿದೆ ಅವೆರಹಳ್ಳಿ, ಚೀಲೂರು, ಪಾದರಹಳ್ಳಿ, ಬನವಾಸಿ, ಬನ್ನಿಕುಪ್ಪೆ, 12 ಕೋಟಿ ವೆಚ್ಚದಲ್ಲಿ ಶಾಲೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಅಲ್ಲದೆ ಕ್ಷೇತ್ರಕ್ಕೆ ಮಧು ಬಂಗಾರಪ್ಪನವರು 5 ಕೆಪಿಎಸ್ಸಿ ಶಾಲೆ ಕೊಟ್ಟಿದ್ದಾರೆ ಹೀಗೆ ಹತ್ತು ಹಲವು ಅಭಿವೃದ್ಧಿಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಹರ್ಷವರ್ಧನ್, ಇಒ ಅಪೂರ್ವ ಕುಲಕರ್ಣಿ, ಎ ಡಿ ಮೋಹನ್ ಬಾಬು, ಬಮೂಲ್ ನಿರ್ದೇಶಕ ಹರೀಶ್ ಕುಮಾರ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ್, ಬಾಲಾಜಿ ಮಂಜೇಗೌಡ ಸುಶೀಲ್ ಕುಮಾರ್ ಸೊಂಟೇನಳ್ಳಿ ರಾಜು, ದಿನೇಶ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಕಾರ್ಯಕರ್ತತರು ಉಪಸ್ಥಿತರಿದ್ದರು.