ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾರೋಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಭೇಟಿ ಶೆಟ್ಟರ್ ಭೇಟಿ

Last Updated 22 ಮೇ 2020, 15:29 IST
ಅಕ್ಷರ ಗಾತ್ರ

ಕನಕಪುರ: ತಾಲ್ಲೂಕಿನ ಹಾರೋಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್ ಶುಕ್ರವಾರ ಭೇಟಿ ನೀಡಿ ಕೈಗಾರಿಕೋದ್ಯಮಿಗಳೊಂದಿಗೆ ಕ್ಷೇತ್ರದಲ್ಲಿನ ಸಮಸ್ಯೆ ಮತ್ತು ಪ್ರಗತಿಗಳ ಬಗ್ಗೆ ಚರ್ಚೆ ನಡೆಸಿದರು.

ಪ್ರಿಟೆಂಕ್‌ ಪಾರ್ಕ್ ಕ್ಲಸ್ಟರ್‌ನ ಚೇರ್ಮನ್‌ ಸಿ.ಆರ್‌.ಜನಾರ್ಧನ, ಉಪಾಧ್ಯಕ್ಷ ಬಿ.ಆರ್‌.ಅಶೋಕ್‌ಕುಮಾರ್‌, ಸಾಮೂಹಿಕ ಸೌಲಭ್ಯ ಕೇಂದ್ರದ ಚಟುವಟಿಕೆಗಳನ್ನು ವಿವರಿಸಿದರು.

57ಎಕರೆ ಪ್ರದೇಶದಲ್ಲಿ ಸ್ಥಾಪಿಸಿರುವ ಪ್ರಿಂಟೆಕ್‌ಪಾರ್ಕ್‌ ಕ್ಲಸ್ಟರ್‌ ಹಾಗೂ ಸುಮಾರು ₹26ಕೋಟಿ ವೆಚ್ಚದಲ್ಲಿ ಪ್ರಾರಂಭಿಸಿರುವ ಸಾಮೂಹಿಕ ಸೌಲಭ್ಯ ಕೇಂದ್ರದ ಬಗ್ಗೆ ತಿಳಿಸಿದಾಗ ಸಚಿವರು ಪ್ರಶಂಸೆ ವ್ಯಕ್ತಪಡಿಸಿದರು.

ಸಿ.ಆರ್‌.ಜನಾರ್ಧನ ಅವರು ಹಂಚಿಕೆ ಆಗಿರುವ ಕೆಲವು ನಿವೇಶನಗಳು ನ್ಯಾಯಾಲಯದಲ್ಲಿ ಇತ್ಯರ್ಥವಾಗದೇ ಉಳಿದಿರುವ ವಿಷಯವನ್ನು ಸಚಿವರ ಗಮನಕ್ಕೆ ತಂದರು.

ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತಾ, ಕೆಐಎಡಿಬಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಸವರಾಜೇಂದ್ರ, ವಿಶೇಷ ಭೂಸ್ವಾಧೀನಾಧಿಕಾರಿ ಮತ್ತು ಹಿರಿಯ ಅಧಿಕಾರಿಗಳಿಗೆ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಲು ಸೂಚನೆ ನೀಡಿದರು.

ಪ್ರಿಂಟೆಕ್‌ ಪ್ರಾರ್ಕ್‌ನಲ್ಲಿ ಸಾವಿರಾರು ಜನರಿಗೆ ಉದ್ಯೋಗಾವಕಾಶ ಹಾಗೂ ಕೌಶಲ್ಯಾಭಿವೃದ್ಧಿ ಕ್ಷೇತ್ರದಲ್ಲಿ ಮಾಡಿರುವ ಗಣನೀಯ ಸಾಧನೆ ಕುರಿತು ಹರ್ಷ ವ್ಯಕ್ತಪಡಿಸಿದ ಸಚಿವರು, ಇಂತಹ ಕ್ಲಸ್ಟ್‌ರ್‌ಗಳು ಬೇರೆ ಬೇರೆ ಕ್ಷೇತ್ರಗಳಲ್ಲಿ ರಾಜ್ಯದಾದ್ಯಂತ ಪ್ರಾರಂಭ ಮಾಡಲು ಕೈಗಾರಿಕೋದ್ಯಮಿಗಳು ಮುಂದೆ ಬರಬೇಕೆಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT