ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಲಜೀವನ್ ಮಿಷನ್ ಯೋಜನೆಯಲ್ಲಿ ಭ್ರಷ್ಟಾಚಾರ: ಲೋಕಾಯುಕ್ತಕ್ಕೆ ದೂರು

Published 10 ಜನವರಿ 2024, 7:59 IST
Last Updated 10 ಜನವರಿ 2024, 7:59 IST
ಅಕ್ಷರ ಗಾತ್ರ

ಕುದೂರು: ಹೋಬಳಿಯ ಬಿಸ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಡೆಯುತ್ತಿರುವ ಭ್ರಷ್ಟಾಚಾರದ ಕುರಿತು ಬಿಸ್ಕೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಸ್. ಸುಹೇಲ್ ನೇತೃತ್ವದಲ್ಲಿ ಸಾರ್ವಜನಿಕರು ಕರ್ನಾಟಕ ಲೋಕಾಯುಕ್ತಕ್ಕೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ದಾಖಲಿಸಿದ್ದಾರೆ.

ಕುಡಿಯುವ ನೀರಿನ ಯೋಜನೆಯಲ್ಲಿ ಕಳಪೆ ಗುಣಮಟ್ಟದ ಪೈಪ್ ಅಳವಡಿಕೆ, ಗುತ್ತಿಗೆದಾರರ ಜೊತೆ ಅಧಿಕಾರಿಗಳ ಶಾಮೀಲು ಹಾಗೂ ಜೆಸಿಬಿ ಯಂತ್ರದಿಂದ ರಸ್ತೆ ಹಾಳುಗೆಡವಿರುವ ಸಂಬಂಧ ದೂರಿನಲ್ಲಿ ತಿಳಿಸಲಾಗಿದೆ.

ರಾಮನಗರ ಜಿಲ್ಲೆಯ ಜೆಜೆಎಂ ಕಾರ್ಯನಿರ್ವಾಹಕ ಅಭಿಯಂತರ ರಂಗಸ್ವಾಮಿ, ಮಾಗಡಿ ಉಪ ವಿಭಾಗದ ಜೆಜೆಎಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿಜಯ್ ಕುಮಾರ್ ಹಾಗೂ ಬಿಸ್ಕೂರು ಗ್ರಾಮ ಪಂಚಾಯಿತಿ ಪಿಡಿಒ ರೇವತಿ ವಿರುದ್ಧ ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT