ಶನಿವಾರ, ಜುಲೈ 2, 2022
25 °C

ರಾಮನಗರ: ಜನಸ್ಪಂದನ ಸಭೆಗೆ ಉಸ್ತುವಾರಿ ಸಚಿವರೇ ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಇಲ್ಲಿನ ತಾಲ್ಲೂಕು ಆಡಳಿತ ಸೌಧದ ಆವರಣದಲ್ಲಿ ಆಯೋಜಿಸಿರುವ ಜನಸ್ಪಂದನ ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವರೇ ಗೈರಾಗಿದ್ದು, ಜನರು ಕಾದು ಕುಳಿತಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ಜನರ ಅಹವಾಲು ಆಲಿಸಲು ಸಭೆ ಆಯೋಜಿಸಲಾಗಿದೆ. ಬೆಳಿಗ್ಗೆ 10ಕ್ಕೆ ಸಭೆ ನಿಗದಿ ಆಗಿದೆ. ಇದೇ ಮೊದಲ ಬಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ಇಂತಹ ಸಭೆ ಆಯೋಜಿಸಲಾಗಿದೆ. ಆದರೆ ಬೆಂಗಳೂರಿನಲ್ಲಿ‌ ಅನ್ಯ ಸಭೆಗಳ ನಿಮಿತ್ತ ಸಚಿವರು ಗೈರಾಗಿದ್ದಾರೆ. ಶಾಸಕಿ ಅನಿತಾ ಕುಮಾರಸ್ವಾಮಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಜನಸ್ಪಂದನ ಸಭೆಗಾಗಿ ಜಿಲ್ಲಾಡಳಿತ ಸಾಕಷ್ಟು‌ ಸಿದ್ಧತೆ ಮಾಡಿಕೊಂಡಿದ್ದು, ಹೊರಗೆ ವಿವಿಧ ಇಲಾಖೆಗಳ ಮಳಿಗೆಗಳನ್ನೂ ಹಾಕಲಾಗಿದೆ. ಜನರೂ ಸಾಕಷ್ಟು ಸಂಖ್ಯೆಯಲ್ಲಿ ಬಂದಿದ್ದು, ಜನಪ್ರತಿನಿಧಿಗಳಿಗಾಗಿ ಕಾಯತೊಡಗಿದ್ದಾರೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು