ಮಂಗಳವಾರ, ನವೆಂಬರ್ 29, 2022
29 °C

ಎಚ್‌ಡಿಕೆ ರಾಜಕೀಯ ಅಂತ್ಯ ಕಾಲ ಸಮೀಪಿಸಿದೆ: ಸಿ.ಪಿ.ಯೋಗೇಶ್ವರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಪಟ್ಟಣ: ಕ್ಷೇತ್ರದ ಶಾಸಕ ಎಚ್.ಡಿ.ಕುಮಾರಸ್ವಾಮಿ ಮುಂಬರುವ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕೀಳುಮಟ್ಟದ ಕೃತ್ಯಗಳನ್ನು ಮಾಡಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಆಕ್ರೋಶ
ವ್ಯಕ್ತಪಡಿಸಿದರು.

ಶನಿವಾರ ತಾಲ್ಲೂಕು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕಿನಲ್ಲಿ ಸಾಕಷ್ಟು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಕಳೆದ ಕೆಲವು ದಿನಗಳಿಂದ ಬಿಜೆಪಿ ಸೇರುತ್ತಿದ್ದಾರೆ. ಇದರಿಂದ ವಿಚಲಿತರಾಗಿರುವ ಕುಮಾರಸ್ವಾಮಿ ಭೂಮಿಪೂಜೆ ಕಾರ್ಯಕ್ರಮ ತಡೆಯಲು ಬೇರೆಡೆಯಿಂದ ಗೂಂಡಾಗಳನ್ನು ಕರೆಸಿ ಗೂಂಡಾ ಸಂಸ್ಕೃತಿ ಪ್ರದರ್ಶಿಸಿದ್ದಾರೆ‘ ಎಂದು ವಾಗ್ದಾಳಿ ನಡೆಸಿದರು.

‘ಕುಮಾರಸ್ವಾಮಿ ಒಬ್ಬ ಬ್ಲಾಕ್ ಮೇಲರ್. ತಮ್ಮ ಕೆಲಸ ಮಾಡಿಸಿಕೊಳ್ಳಲು ಎಂತಹ ಕೆಳಮಟ್ಟಕ್ಕೂ ಇಳಿಯುತ್ತಾರೆ. ವಿಧಾನಸೌಧದಲ್ಲಿ ಯಾರ‍್ಯಾರನ್ನು ಯಾವ ರೀತಿ ಬ್ಲಾಕ್ ಮೇಲ್ ಮಾಡಿ ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುತ್ತಾರೆ ಎಂದು ಎಲ್ಲರಿಗೂ ತಿಳಿದಿದೆ. ಅವರಿಗೆ ರಾಜಕೀಯ ಅಂತ್ಯವಾಗುವ ಕಾಲ ಸಮೀಪವಾಗಿದೆ. ನನ್ನ ಅಭಿವೃದ್ಧಿ ಸಹಿಸದೆ ಈ ರೀತಿಯಾಗಿ ಕ್ಷೇತ್ರದಲ್ಲಿ ರೌಡಿಸಂ ನಡೆಸುತ್ತಿದ್ದಾರೆ. ಇದಕ್ಕೆ ನಾನು ಹೆದರುವುದಿಲ್ಲ. ಅವರಿಗೆ ಮತದಾರರೇ ತಕ್ಕಪಾಠ ಕಲಿಸಲಿದ್ದಾರೆ’
ಎಂದರು.

‘ಕ್ಷೇತ್ರದ ಅಭಿವೃದ್ದಿಗೆ ಮುಖ್ಯಮಂತ್ರಿಗಳಿಂದ ₹50 ಕೋಟಿ ಅನುದಾನ ತಂದಿದ್ದೇನೆ. ಎಚ್.ಡಿ.ಕುಮಾರಸ್ವಾಮಿ ಅವರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಹಾಕಿ ಆಹ್ವಾನ ಪತ್ರಿಕೆಯನ್ನು ಅವರ ಕಚೇರಿಗೆ ಕಳುಹಿಸಿದ್ದೇವೆ. ಆದರೆ ಒಬ್ಬ ಜವಾಬ್ದಾರಿಯುತವಾದ ಸ್ಥಾನದಲ್ಲಿರುವ ಕುಮಾರಸ್ವಾಮಿ ಈ ರೀತಿಯಾಗಿ ತಮ್ಮ ಪಕ್ಷದ ಮುಖಂಡರು, ಕಾರ್ಯಕರ್ತನ್ನುನ್ನು ಬಿಟ್ಟು ಅಭಿವೃದ್ಧಿ ಕಾಮಗಾರಿಗಳಿಗೆ ತಡೆವೊಡ್ಡುವುದು ಎಷ್ಟು ಸರಿ, ಇದಕ್ಕೆ ಜನತೆಯೆ ಉತ್ತರ ನೀಡುತ್ತಾರೆ’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹುಲುವಾಡಿ ದೇವರಾಜು, ತಾಲ್ಲೂಕು ಘಟಕದ ಅಧ್ಯಕ್ಷ ಜಯರಾಮು, ನಗರ ಘಟಕದ ಅಧ್ಯಕ್ಷ ಶಿವು, ಮುಖಂಡ ಎಸ್.ಲಿಂಗೇಶ್ಕುಮಾರ್, ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಲುವೇಗೌಡ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು