ರಾಮನಗರ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಬಿಜೆಪಿ ಅಥವಾ ಕಾಂಗ್ರೆಸ್ ಜೊತೆ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

2023ರ ಚುನಾವಣೆಗೆ ಸಿದ್ಧತೆ ಚಾಲನೆ ನೀಡುವ ಸಲುವಾಗಿ ಇಲ್ಲಿನ ಚಾಮುಂಡೇಶ್ವರಿ ದೇವಾಲಯದಲ್ಲಿ ಶುಕ್ರವಾರ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ‘ರಾಜ್ಯದಲ್ಲಿ ಜೆಡಿಎಸ್ ಮುಗಿದೇ ಹೋಯಿತು ಎನ್ನುವ ಭಾವನೆ ಕೆಲವರಲ್ಲಿದೆ. ನಮ್ಮ ಪಕ್ಷದ ಕೆಲವು ವ್ಯಕ್ತಿಗಳು ಬೇರೆ ಪಕ್ಷದವರಿಗೆ ಬೇಕಾಗಿರಬಹುದು. ಆದರೆ ನಮಗೆ ಜನರ ಅಭಿವೃದ್ಧಿ ಮುಖ್ಯ. ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ನಡೆಸುವ ಪ್ರಶ್ನೆಯೇ ಇಲ್ಲ’ ಎಂದರು.

‘ಮುಂದಿನ ದಿನಗಳಲ್ಲಿ ಜೆಡಿಎಸ್ ಸ್ವಂತ ಬಲದಲ್ಲಿ ಅಧಿಕಾರಕ್ಕೆ ಬರಲಿದೆ. ಈ ಸಂದರ್ಭ ‘ಪಂಚರತ್ನ’ ಹೆಸರಿನಲ್ಲಿ ವರ್ಷಕ್ಕೆ ಒಂದರಂತೆ ಪ್ರಮುಖ ಐದು ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುವುದು. ಜಲವಿವಾದ, ಕೃಷಿ, ನಾಡಿನ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹುಡುಕಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.