ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು ಅಪಘಾತ: ಜೆಡಿಎಸ್ ಮುಖಂಡನ ಮಗ ಸಾವು

Published 16 ಮಾರ್ಚ್ 2024, 15:56 IST
Last Updated 16 ಮಾರ್ಚ್ 2024, 15:56 IST
ಅಕ್ಷರ ಗಾತ್ರ

ರಾಮನಗರ: ನಗರದ ಹೊರವಲಯದ ನೇಟಸ್ ಶಾಲೆ ಬಳಿಯ ಬೆಂಗಳೂರು– ಮೈಸೂರು ಹೆದ್ದಾರಿಯಲ್ಲಿ ಶನಿವಾರ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ ಅಭಿಷೇಕ್ ಡಿ. ಗೌಡ (29) ಎಂಬುವರು ಮೃತಪಟ್ಟಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆಸ್ತೂರು ಗ್ರಾಮದ ಅಭಿಷೇಕ್ ಅವರು ಜೆಡಿಎಸ್ ಮುಖಂಡ ದಾಸೇಗೌಡ ಅವರ ಪುತ್ರ. ಸಂಜೆ 4 ಗಂಟೆ ಸುಮಾರಿಗೆ ಮಂಡ್ಯದಿಂದ ಬೆಂಗಳೂರು ಕಡೆಗೆ ಕಾರಿನಲ್ಲಿ ವೇಗವಾಗಿ ಹೋಗುತ್ತಿದ್ದ ಅವರು ಮೇಲ್ಸೇತುವೆ ಬಳಿ ನಿಯಂತ್ರಣ ಕಳೆದುಕೊಂಡು ವಿಭಜಕಕ್ಕೆ ಗುದ್ದಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ವಿಭಜಕ ದಾಟಿ ಮೇಲ್ಸೇತುವೆ ನಡುವಣ ಜಾಗದಿಂದ ಕೆಳಕ್ಕೆ ಬಿದ್ದು ಪಲ್ಟಿಯಾಗಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಅಭಿಷೇಕ್ ಅವರನ್ನು ರಾಮನಗರದ ರಾಮಕೃಷ್ಣ ಆಸ್ಪತ್ರೆಗೆ ಕರೆತರಲಾಯಿತು. ಆದರೆ, ದೇಹದ ವಿವಿಧ ಭಾಗಗಳಿಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಬದುಕುಳಿಯಲಿಲ್ಲ. ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದ್ದು, ಘಟನೆ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ರಾಮನಗರ ಸಂಚಾರ ಠಾಣೆ ಪೊಲೀಸರು ತಿಳಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT