ಗುರುವಾರ , ಅಕ್ಟೋಬರ್ 28, 2021
18 °C

ಕೇತಗಾನಹಳ್ಳಿಯಲ್ಲಿ ಜೆಡಿಎಸ್ ಸಂಘಟನಾ ಕಾರ್ಯಾಗಾರ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ; ಬಿಡದಿಯ ಕೇತಗಾನಹಳ್ಳಿಯ ಕುಮಾರಸ್ವಾಮಿ ಅವರ ತೋಟದ ಆವರಣದಲ್ಲಿ ಸೋಮವಾರ ಜೆಡಿಎಸ್ ಸಂಘಟನಾ ಕಾರ್ಯಾಗಾರಕ್ಕೆ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಚಾಲನೆ ನೀಡಿದರು‌.

ಪಕ್ಷದ ಶಾಸಕಾಂಗ  ನಾಯಕ ಎಚ್.ಡಿ. ಕುಮಾರಸ್ವಾಮಿ ಮಾತನಾಡಿ,  'ಕಾರ್ಯಾಗಾರದಲ್ಲಿ 123 ಅಭ್ಯರ್ಥಿಗಳ ಹೆಸರು ಘೋಷಣೆ ಆಗಿದೆ‌. ಇವರಿಗೆ ಗ್ರೀನ್ ಕಾರ್ಡ್ ವಿತರಣೆ ಮಾಡಲಾಗುವುದು. ಮುಂದಿನ ಜನವರಿವರೆಗೆ ಅವರ ಕಾರ್ಯಗಳನ್ನು ನೋಡಿ ನಂತರ ಟಿಕೆಟ್ ಬಗ್ಗೆ ಅಂತಿಮವಾಗಿ ತೀರ್ಮಾನಿಸಲಾಗುವುದು' ಎಂದರು.

'ನಮ್ಮ ಪಕ್ಷದಿಂದ ಶಕ್ತಿ ಪಡೆದುಕೊಂಡು ಬೇರೆ ಬೇರೆ ಪಕ್ಷಕ್ಕೆ ಹೋಗಿ ಮುಖ್ಯಮಂತ್ರಿ ಆಗಿದ್ದಾರೆ‌‌. ನಮ್ಮ ಪಕ್ಷದಿಂದಲೇ ಬೆಳೆದ ನಾಯಕರೊಬ್ಬರು ನಮ್ಮ ಪಕ್ಷದ ವಿರುದ್ಧವೇ ಮಾತನಾಡುತ್ತಾರೆ' ಎಂದು ಟೀಕಿಸಿದರು.

'ಮುಂದಿನ 17 ತಿಂಗಳು ನಿರಂತರವಾಗಿ ಪಕ್ಷದ ಕಾರ್ಯಕ್ರಮಗಳು ನಡೆಯಲಿವೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರ ಹಿಡಿಯಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು