‘ಬೆಂಬಲ ಬೆಲೆ ಕೊಡಿಸಿದ್ದು ಕುಮಾರಣ್ಣ’
‘ಕುಮಾರಸ್ವಾಮಿ ಅವರಿಗೆ ದೆಹಲಿಯಲ್ಲಿ ಕೆಲಸವಿಲ್ಲ. ಅದಕ್ಕೆ ರಾಜ್ಯಕ್ಕೆ ಬರುತ್ತಾರೆ’ ಎಂಬ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ನಿಖಿಲ್ ‘ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ಕೊಡಿಸಿದ್ದು ಡಿ.ಕೆ. ಸುರೇಶ್ ಅವರಾ ಅಥವಾ ಡಿ.ಕೆ. ಶಿವಕುಮಾರ್ ಕೊಡಿಸಿದ್ರಾ? ಬೆಲೆ ಕುಸಿತದಿಂದ ಸಂಕಷ್ಟದಲ್ಲಿದ್ದ ಮಾವು ಬೆಳೆಗಾರರ ನೆರವಿಗೆ ಕುಮಾರಣ್ಣ ಬಂದರು. ಅವರು ಬರೆದ ಪತ್ರಕ್ಕೆ ಸ್ಪಂದಿಸಿದ ಕೃಷಿ ಸಚಿವರು ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆಯಡಿ ಬೆಂಬಲ ಬೆಲೆ ಘೋಷಿಸಿದರು’ ಎಂದರು.