ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನಸಿಕ ಸದೃಢತೆಗೆ ಕ್ರೀಡೆ ಅವಶ್ಯಕ: ಸಬ್ ಇನ್ ಸ್ಪೆಕ್ಟರ್ ಭಾಸ್ಕರ್ ಕಿವಿಮಾತು

Last Updated 19 ಜನವರಿ 2020, 14:17 IST
ಅಕ್ಷರ ಗಾತ್ರ

ಚನ್ನಪಟ್ಟಣ: ‘ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆ ಅವಶ್ಯಕ’ ಎಂದು ಅಕ್ಕೂರು ಪೊಲೀಸ್ ಠಾಣಾ ಸಬ್ ಇನ್‌ಸ್ಪೆಕ್ಟರ್ ಭಾಸ್ಕರ್ ಹೇಳಿದರು.

ಇಲ್ಲಿನ ಗುಡಿಸರಗೂರು ಗ್ರಾಮದಲ್ಲಿ ಶ್ರೀ ಬಸವೇಶ್ವರ ಸೇವಾ ಸಮಿತಿ ಆಶ್ರಯದಲ್ಲಿ ಈಚೆಗೆ ಆಯೋಜಿಸಲಾಗಿದ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕೇವಲ ಗ್ರಾಮೀಣ ಪ್ರದೇಶದ ಕ್ರೀಡೆಯಾಗಿದ್ದ ಕಬ್ಬಡಿ ಈಗ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುತ್ತಿದೆ. ಇದು ಕಬಡ್ಡಿ ಮಹತ್ವವನ್ನು ಎತ್ತಿ ಹಿಡಿದಿದೆ’ ಎಂದರು.

‘ಗ್ರಾಮೀಣ ಪ್ರದೇಶದಲ್ಲಿ ಕಬಡ್ಡಿ ಪಂದ್ಯಾವಳಿ ಆಯೋಜಿಸಿ ಸೋದರತ್ವ ಹಾಗೂ ಸ್ನೇಹ ಮೌಲ್ಯವನ್ನು ಬಿಂಬಿಸಲು ಹೊರಟಿರುವುದು ಸ್ವಾಗತಾರ್ಹ ಬೆಳವಣಿಗೆ. ಯುವಕರು ಯಾವುದೇ ಕೆಟ್ಟ ಚಟಗಳನ್ನು ಬೆಳೆಸಿಕೊಳ್ಳದೆ ಇಂತಹ ಆರೋಗ್ಯಕರ ವಾತಾವರಣ ನಿರ್ಮಿಸಿರುವುದು ಪ್ರಶಂಸನೀಯ. ಯುವಕರಲ್ಲಿ ಈ ರೀತಿಯ ಬೆಳವಣಿಗೆಗಳು ಸೃಷ್ಟಿಯಾಗಿರುವುದು ಸಂತಸದ ವಿಚಾರ’ ಎಂದರು.

ಗ್ರಾಮದ ಮುಖಂಡರಾದ ಕೃಷ್ಣಪ್ರಸಾದ್, ಶಿವಲಿಂಗೇಗೌಡ, ಬಸವರಾಜೆ ಅರಸ್, ಪೊಲೀಸ್ ಕಾನ್ ಸ್ಟೇಬಲ್ ಶೇಖರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT