ಶುಕ್ರವಾರ, ಸೆಪ್ಟೆಂಬರ್ 17, 2021
23 °C

ಎಚ್‌ಡಿಕೆ ತೋಟದ ಮನೆಗೆ ಕಲಬುರ್ಗಿ ಪಾಲಿಕೆ ಸದಸ್ಯರ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಆಯ್ಕೆಯಾದ ನಾಲ್ವರು ಸದಸ್ಯರು ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು

ರಾಮನಗರ: ಈಚೆಗೆ ನಡೆದ ಕಲಬುರ್ಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಆಯ್ಕೆಯಾದ ನಾಲ್ವರು ಸದಸ್ಯರು ಬುಧವಾರ ಬಿಡದಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು.

ಕಲಬುರ್ಗಿ ಪಾಲಿಕೆಯು ಸದ್ಯ ಅತಂತ್ರವಾಗಿದ್ದು, ಅಧಿಕಾರ ಹಿಡಿಯುವಲ್ಲಿ ಜೆಡಿಎಸ್ ಪಾತ್ರ ನಿರ್ಣಾಯಕವಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳೆರಡೂ ಅಧಿಕಾರಕ್ಕಾಗಿ ಕಸರತ್ತು ಆರಂಭಿಸಿವೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಸೂಚನೆ ಮೇರೆಗೆ ಜೆಡಿಎಸ್‌ನ ಸದಸ್ಯರಾದ ಕೃಷ್ಣಾರೆಡ್ಡಿ, ನಾಸಿರ್, ಅಲಿಮುದ್ದೀನ್‌ ಪಟೇಲ್‌ ಹಾಗೂ ಸಾಜಿತ್‌ ಕಲ್ಯಾಣಿ ಎಂಬುವರು ಬಿಡದಿಗೆ ಧಾವಿಸಿದ್ದಾರೆ.

ಈ ಸಂದರ್ಭ ಪತ್ರಕರ್ತರ ಜೊತೆ ಮಾತನಾಡಿದ ಪಾಲಿಕೆ ಸದಸ್ಯರು ‘ಕುಮಾರಣ್ಣ ಹಾಗೂ ದೇವೇಗೌಡರ ಸೂಚನೆ ಮೇರೆಗೆ ಇಲ್ಲಿಗೆ ಬಂದಿದ್ದೇವೆ. ಅವರ ಯಾವುದೇ ನಿರ್ಧಾರಕ್ಕೆ ಬದ್ಧರಾಗಿದ್ದೇವೆ’ ಎಂದರು.

ಇನ್ನಷ್ಟು ಓದು...

* ಕಲಬುರ್ಗಿ ಪಾಲಿಕೆ | ಕಾಂಗ್ರೆಸ್‌ಗೆ ಸಹಕಾರ ನೀಡಲು ಖರ್ಗೆ ಕೇಳಿದ್ದಾರೆ: ದೇವೇಗೌಡ
* ಕಲಬುರ್ಗಿ: ಪಾಲಿಕೆಯಲ್ಲಿ ಅಧಿಕಾರಕ್ಕೆ ಬರಲು ಕಾಂಗ್ರೆಸ್, ಬಿಜೆಪಿ ನಿರಂತರ ಯತ್ನ
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು