ಕನಕಪುರ: ‘ಪೆಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯ ಗುಂಡಿಗೆ ಹಿಂದೂಗಳು ಬಲಿಯಾಗಿ ಇಂದಿಗೆ ಒಂದು ವರ್ಷವಾಯಿತು. ಅದೊಂದು ಕರಾಳ ದಿನವಾಗಿದ್ದು, ಹುತಾತ್ಮರಾದವರಿಗೆ ನುಡಿ ನಮನ ಸಲ್ಲಿಸಿ ಅವರ ಆತ್ಮಕ್ಕೆ ಶಾಂತಿ ಕೋರುವುದು ಪ್ರತಿಯೊಬ್ಬರ ಕರ್ತವ್ಯ’ ಎಂದು ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗಾರ್ಜುನ್ ಗೌಡ ಹೇಳಿದರು.

ನಗರದ ಚನ್ನಬಸಪ್ಪ ವೃತ್ತದಲ್ಲಿ ಸೇನೆಯಿಂದ ಹಮ್ಮಿಕೊಂಡಿದ್ದ ಪೆಹಲ್ಗಾಮ್ ದಾಳಿಯಲ್ಲಿ ಹುತಾತ್ಮರಾದವರ ಸ್ಮರಣೆ ಕಾರ್ಯಕ್ರಮದಲ್ಲಿ ಹುತಾತ್ಮರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ‘ಮತಾಂಧ ಮುಸ್ಲಿಂ ಭಯೋತ್ಪಾದಕರು ಹಿಂದೂ ಧರ್ಮೀಯರ ಧರ್ಮ ಕೇಳಿ, ಮಹಿಳೆಯರ ಸಿಂಧೂರ ನೋಡಿ ಹಣೆಗೆ ಗುಂಡಿಟ್ಟು ಕೊಂದಿದ್ದಾರೆ. ಇಂದು ಅತ್ಯಂತ ಹೇಯ ಕೃತ್ಯ’ ಎಂದರು.

‘ಭಯೋತ್ಪಾದನೆಯನ್ನು ಎಲ್ಲರೂ ಖಂಡಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ನಮ್ಮ ಮನೆ ಬಾಗಿಲಿಗೆ ಬಂದು ನಮ್ಮನ್ನು ಹತ್ಯೆ ಮಾಡಿದರು ಆಶ್ಚರ್ಯಪಡಬೇಕಾಗಿಲ್ಲ. ನಮ್ಮ ವ್ಯವಹಾರ, ವ್ಯಾಪಾರ ನಮ್ಮಲ್ಲೇ ಇರಲಿ ಎಂಬುದನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕಾಗಿ, ಎಲ್ಲರೂ ಒಂದಾಗಬೇಕು. ಆಗ ಮಾತ್ರ ಬಲಿಷ್ಠ ಭಾರತ ನಿರ್ಮಾಣ ಸಾಧ್ಯ’ ಎಂದು ಹೇಳಿದರು.

ಸೇನೆಯ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಪರಮೇಶ್ ಗೌಡ, ಮಂಡ್ಯ ವಿಭಾಗೀಯ ಅಧ್ಯಕ್ಷ ರಾಜೇಶ್, ಪ್ರಧಾನ ಕಾರ್ಯದರ್ಶಿ ನವೀನ್, ಜಿಲ್ಲಾ ಪದಾಧಿಕಾರಿಗಳಾದ ಸಾಗರ್, ರಾಜಗೋಪಾಲ್, ಕುಮಾರ, ಸ್ವಾಮಿ, ಶ್ರೀನಿವಾಸ, ಜೀವನ್, ಮೂರ್ತಿ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-14-183645941

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.