ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಜೀವನದ

Published 27 ಜೂನ್ 2024, 4:17 IST
Last Updated 27 ಜೂನ್ 2024, 4:17 IST
ಅಕ್ಷರ ಗಾತ್ರ

ಕನಕಪುರ: ‘ಶೈಕ್ಷಣಿಕವಾಗಿ ವಿದ್ಯಾರ್ಥಿಗಳಿಗೆ ಎಸ್‌ಎಸ್ಎಲ್‌ಸಿ ಪ್ರಮುಖ ಘಟ್ಟವಾಗಿದೆ. ಈ ಸಮಯದಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು, ಮನಸ್ಸನ್ನು ಓದಿನ ಕಡೆಗೆ ಕೇಂದ್ರೀಕರಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ರಾಮಪ್ಪ ಕಿವಿಮಾತು ಹೇಳಿದರು.

ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ಐ.ಗೊಲ್ಲಳ್ಳಿ ಗ್ರಾಮ ಸ್ವರಾಜ್ಯ ಪ್ರೌಢಶಾಲೆಯಲ್ಲಿ ಬುಧವಾರ 10ನೇ ತರಗತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಗಾಗಿ ಕೊಡುತ್ತಿರುವ ‘ಪ್ರಜಾವಾಣಿ’ ಪತ್ರಿಕೆ ವಿತರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ 10 ಮತ್ತು 12ನೇ ತರಗತಿ ಪ್ರಮುಖವಾದ ಹಂತ. ಈ ಸಮಯದಲ್ಲಿ ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಒತ್ತು ಕೊಡಬೇಕು. ಹೆಚ್ಚಿನ ಜ್ಞಾನಾರ್ಜನೆ ಮತ್ತು ಶೈಕ್ಷಣಿಕ ಪ್ರಗತಿಗೆ ‘ಪ್ರಜಾವಾಣಿ’ ಪತ್ರಿಕೆಯನ್ನು ಕೊಡಲಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

‘ವೈದ್ಯರು ಜೀವ ಉಳಿಸಿದರೆ, ಶಿಕ್ಷಕರು ಜೀವನ ರೂಪಿಸುತ್ತಾರೆ. ಸಮಾಜದಲ್ಲಿ ಒಳ್ಳೆಯ ಜೀವನ ಕಟ್ಟಿಕೊಳ್ಳಲು ಕಾರಣರಾಗುತ್ತಾರೆ. ಆಗಾಗಿ ಸಮಾಜದಲ್ಲಿ ವೈದ್ಯರು ಮತ್ತು ಶಿಕ್ಷಕರ ಬಗ್ಗೆ ಅಪಾರವಾದ ಗೌರವವಿದೆ, ಆ ಗೌರವಕ್ಕೆ ಧಕ್ಕೆ ಬರದಂತೆ ಶಿಕ್ಷಕರು ನಡೆದುಕೊಳ್ಳಬೇಕು, ತಮ್ಮ ಸ್ಥಾನಕ್ಕೆ ನ್ಯಾಯ ದೊರಕಿಸಬೇಕು’ಎಂದು ಕಿವಿಮಾತು ಹೇಳಿದರು.

ಇಸಿಒಗಳಾದ ರುದ್ರಮುನಿ, ಬಿ. ರಂಗಸ್ವಾಮಿ, ಶಾಲೆಯ ಹಿರಿಯ ಶಿಕ್ಷಕಿ ರೂಪಶ್ರೀ ಸೇರಿದಂತೆ ಶಿಕ್ಷಕರು ಹಾಗೂ ಶಾಲೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT