ಕನಕಪುರ: ತಮಿಳುನಾಡಿನ ಕೃಷ್ಣಗಿರಿ ಕಸಾಯಿ ಖಾನೆಗೆ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 39 ಜಾನುವಾರುಗಳನ್ನುಬಜರಂಗದಳದ ಕಾರ್ಯಕರ್ತರು ಬುಧವಾರ ಬೆಳಗಿನ ಜಾವ ರಕ್ಷಣೆ ಮಾಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಬಜರಂಗದಳದ ಕಾರ್ಯಕರ್ತರು ತಾಲ್ಲೂಕಿನ ತೊಪ್ಪಗನಹಳ್ಳಿ ಗ್ರಾಮದ ಬಳಿ ಕ್ಯಾಂಟರ್ ಅಡ್ಡಗಟ್ಟಿ ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಇಕ್ಕಟ್ಟಾದ ಜಾಗದಲ್ಲಿ 19 ಎಮ್ಮೆ, ಆರು ಸೀಮೆ ಹಸು, ಕರು ಸೇರಿದಂತೆ ಒಟ್ಟು 39 ಜಾನುವಾರುಗಳನ್ನು ಉಸಿರಾಡಲು ಆಗದಂತೆ ವಾಹನದಲ್ಲಿ ತುಂಬಲಾಗಿತ್ತು.

ಕ್ಯಾಂಟರ್ ಚಾಲಕ, ಜೊತೆಗಿದ್ದ ಮೈಸೂರು ಮೂಲದ ಬಲರಾಮ್ ಮತ್ತು ಸೈಯದ್ ಎಂಬ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಮೈಸೂರು ಕಡೆಯಿಂದ ತಮಿಳುನಾಡಿನ ಕೃಷ್ಣಗಿರಿಯ ಕಸಾಯಿಖಾನೆಗೆ ಜಾನವಾರು ಸಾಗಣೆ ಮಾಡುತ್ತಿರುವುದಾಗಿ ಆರೋಪಿಗಳು ಒಪ್ಪಿಕೊಂಡರು.

ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ಇಬ್ಬರನ್ನು ವಶಕ್ಕೆ ಪಡೆದರು. ಜಾನವಾರುಗಳನ್ನು ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಗೋಶಾಲೆಗೆ ಕಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-14-1894063344

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.