ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶನೇಶ್ವರ ಕರಗ , ವಾರ್ಷಿಕೋತ್ಸವ

Published 19 ಮಾರ್ಚ್ 2024, 5:09 IST
Last Updated 19 ಮಾರ್ಚ್ 2024, 5:09 IST
ಅಕ್ಷರ ಗಾತ್ರ

ಕನಕಪುರ: ತಾಲ್ಲೂಕಿನ ಕಸಬಾ ಹೋಬಳಿ ಕಲ್ಲಳ್ಳಿ ಗ್ರಾಮದಲ್ಲಿರುವ ಶನೇಶ್ವರ ದೇವರ 40ನೇ ವರ್ಷದ ಕರಗ ಮಹೋತ್ಸವ ಮತ್ತು ವಾರ್ಷಿಕೋತ್ಸವ ಸಮಾರಂಭವು ಶನಿವಾರ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು.

ಶನೇಶ್ವರ ದೇವಾಲಯದಲ್ಲಿ ಶನಿವಾರ ಬೆಳಿಗ್ಗೆ ಶನಿದೇವರು ಸೇರಿದಂತೆ ದೇವಾಲಯದಲ್ಲಿನ ವಿವಿಧ ದೇವರಿಗೆ ಫಲಪುಷ್ಪಗಳಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು.

ದೇವಾಲಯದ ಒಳಗೆ ಮತ್ತು ಹೊರಗಡೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು.  ಭಕ್ತರು ಬೆಳಿಗ್ಗೆ 6 ಗಂಟೆಯಿಂದ ಶನಿವಾರ ರಾತ್ರಿವರೆಗೂ ದೇವರ ದರ್ಶನ ಪಡೆದರು. ಬೆಳಿಗ್ಗೆ 8 ಗಂಟೆಯಿಂದಲೇ ದೇವಾಲಯದ ಆವರಣದಲ್ಲಿ ಅನ್ನದಾಸೋಹ ಆಯೋಜಿಸಲಾಗಿತ್ತು. ದಾಸೋಹದಲ್ಲಿ ರಾಗಿಮುದ್ದೆ, ಅವರೆಕಾಳು ಸಾರು, ಪಾಯಸವನ್ನು ಬಡಿಸಲಾಯಿತು.

ಕನಕಪುರ ಕಲ್ಲಹಳ್ಳಿ ಗ್ರಾಮದಲ್ಲಿ ಶನಿವಾರ ಶನೇಶ್ವರ ದೇವಾಲಯವನ್ನು ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಅಲಂಕರಿಸಲಾಗಿತ್ತು
ಕನಕಪುರ ಕಲ್ಲಹಳ್ಳಿ ಗ್ರಾಮದಲ್ಲಿ ಶನಿವಾರ ಶನೇಶ್ವರ ದೇವಾಲಯವನ್ನು ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಅಲಂಕರಿಸಲಾಗಿತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT