ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಘಾಟನೆಗೂ ಮುನ್ನ ಸೋರುತ್ತಿದೆ ಟ್ಯಾಂಕ್

Published 6 ಏಪ್ರಿಲ್ 2024, 6:02 IST
Last Updated 6 ಏಪ್ರಿಲ್ 2024, 6:02 IST
ಅಕ್ಷರ ಗಾತ್ರ

ಹಾರೋಹಳ್ಳಿ: ಪಟ್ಟಣಕ್ಕೆ ಕಾವೇರಿ ನೀರು ಸರಬರಾಜು ಮಾಡಲು ₹7 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಓವರ್‌ ಹೆಡ್‌ ಟ್ಯಾಂಕ್‌ ಬಳಕೆಗೂ ಮುನ್ನವೇ ಸೋರುತ್ತಿದೆ.

ಕಳೆದ 4 ವರ್ಷದ ಹಿಂದೆ 7.5ಲಕ್ಷ ಲೀ. ನೀರು ಶೇಖರಿಸುವ ಸಾಮರ್ಥ್ಯದ ಟ್ಯಾಂಕ್‌ ನಿರ್ಮಾಣ ಕಾಮಗಾರಿಯನ್ನು ಸುಮಾರು ₹7ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗಿತ್ತು. ಕಳೆದ ನಾಲ್ಕು ವರ್ಷದಿಂದಲೂ ಕಾಮಗಾರಿ ಕುಂಟುತ್ತಲೇ ಸಾಗಿತ್ತು. ಇದೀಗ ಕಾಮಗಾರಿ ಮುಕ್ತಾಯವಾಗಿದ್ದು. ಟ್ಯಾಂಕ್‌ ಅನ್ನು ಪರೀಕ್ಷಿಸಲು ನೀರು ತುಂಬಿಸಿದಾಗ ನೀರು ಸೋರಿಕೆಯಾಗಿದೆ. ಇದಕ್ಕೆ ಕಳಪೆ ಕಾಮಗಾರಿಯೇ ಕಾರಣ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಕಾಮಗಾರಿಯು ಕಳಪೆಯಿಂದ ಕೂಡಿದ್ದು, ಗುತ್ತಿಗೆದಾರರ ವಿರುಧ್ಧ ಕ್ರಮ ಕೈಗೊಳ್ಳಬೇಕು. ಇದನ್ನು ಗಮನಿಸಬೇಕಾದ ಅಧಿಕಾರಿಗಳು ಸಹ ಕರ್ತವ್ಯ ಲೋಪ ಎಸಗಿದ್ದಾರೆ. ಈ ಕೂಡಲೇ ಸಂಬಂಧಪಟ್ಟವರು ಇತ್ತ ಗಮನಹರಿಸಬೇಕು ಎಂದು ಅಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮೊದಲೇ ಬೇಸಿಗೆ ಬೇಗೆಯಿಂದ ನರಳುತ್ತಿದ್ದೇವೆ. ನೀರಿಗಾಗಿ ಎಲ್ಲೆಡೆ ಹಾಹಾಕಾರ ಪ್ರಾರಂಭವಾಗಿದೆ. ಹೀಗಿರುವಾಗ ಇಲ್ಲಿನ ಟ್ಯಾಂಕ್ ಸಂಪೂರ್ಣವಾಗಿ ಸೋರುತ್ತಿದೆ. ಆದರೆ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷದಿಂದ ಹತ್ತಾರು ವರುಷ ಜನರಿಗೆ ಕುಡಿಯುವ ನೀರು ಒದಗಿಸುವ ಟ್ಯಾಂಕ್ ಉದ್ಘಾಟನೆಗೂ ಮುನ್ನ ಸೋರುತ್ತಿದೆ.

ಇದೀಗ ಯಾವುದೋ ಒಂದು ರಾಸಾಯನಿಕ ಬಳಸಿ ಅದನ್ನು ಮುಚ್ಚುವ ಕೆಲಸ ಮಾಡಲಾಗುತ್ತಿದೆ. ಈ ಕೂಡಲೇ ಗಮನಹರಿಸಿ ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಕಾನೂನು ಹೋರಾಟ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT