ಪ್ರಜಾವಾಣಿ ವಾರ್ತೆ

ಕನಕಪುರ: ತಾಲ್ಲೂಕಿನ ಸಾತನೂರು ಹೋಬಳಿ ಸಂಬಾಪುರ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರ ಮೇಲೆ ರಾಡ್ನಿಂದ ಹಲ್ಲೆ ಮಾಡಿರುವ ಪ್ರಕರಣ ತಡವಾಗಿ ಗೊತ್ತಾಗಿದೆ.

ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಕಿರಣ (25) ಹಲ್ಲೆಗೊಳಗಾಗಿ ಗಾಯಗೊಂಡ ಕೂಲಿ ಕಾರ್ಮಿಕ. ಇದೇ ತಾಲ್ಲೂಕಿನ ಗೋವಿಂದಪ್ಪ ಹಲ್ಲೆ ಮಾಡಿದ ಆರೋಪಿ.

ಜಲಜೀವನ್ ಮಿಷನ್ ಕಾಮಗಾರಿ ಕೆಲಸಕ್ಕಾಗಿ ತುಮಕೂರಿನ ಕೂಲಿ ಕಾರ್ಮಿಕ ಕುಟುಂಬಗಳು ಸಾತನೂರು ಹೋಬಳಿ ಸಂಬಾಪುರ ವಾಸ ಇವೆ.

ಕಳೆದ ಮೇ 16 ರಂದು ಆರೋಪಿ ಗೋವಿಂದಪ್ಪ ಕಿರಣ ಅವರ ಕಾಲಿಗೆ ಕಬ್ಬಿಣದ ರಾಡ್ನಿಂದ ಹೊಡೆದಿದ್ದರಿಂದ ಕಾಲಿನ ಮೂಳೆ ಮುರಿದಿತ್ತು.

ಬೆಂಗಳೂರಿನ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದು, ಈ ಸಂಬಂಧ ಗಾಯಾಳು ಕಿರಣ್ ತಾಯಿ ಎಲ್ಲಮ್ಮ ಜೂನ್ 5 ರಂದು ಸಾತನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಾತನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.