ಕನಕಪುರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನ್ಮದಿನದ ಪ್ರಯುಕ್ತ ಡಿಕೆಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಗುರುವಾರ 22 ಫಲಾನುಭವಿಗಳಿಗೆ ವಾಣಿಜ್ಯ ಬಳಕೆ ಮೂರು ಚಕ್ರದ ಎಲೆಕ್ಟ್ರಿಕ್ ವಾಹನಗಳನ್ನು ಕಾಂಗ್ರೆಸ್ ಕಚೇರಿಯಲ್ಲಿ ವಿತರಿಸಲಾಯಿತು.

ತಾಲ್ಲೂಕಿನ ಪ್ರತಿ ಹೋಬಳಿಯಿಂದ ಮೂವರಂತೆ ಹಾಗೂ ಪಟ್ಟಣ ಸೇರಿ ಒಟ್ಟು 22 ಮಂದಿಯನ್ನು ಟ್ರಸ್ಟ್ ವತಿಯಿಂದ ಆಯ್ಕೆ ಮಾಡಲಾಗಿತ್ತು.

ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಆಯ್ಕೆಯಾದ 22 ಮಂದಿ ಫಲಾನುಭವಿಗಳಿಗೆ ಎಲೆಕ್ಟ್ರಿಕ್ ವಾಹನ ಹಸ್ತಾಂತರಿಸಿದರು.

ನಂತರ ಮಾತನಾಡಿ, ಹಳ್ಳಿಗಳಿಗೆ ತೆರಳಿ ತರಕಾರಿ, ಸೊಪ್ಪು ಮಾರಾಟ ಮಾಡುವ ಬಡ ಕುಟುಂಬಗಳಿಗೆ ಡಿ.ಕೆ.ಶಿವಕುಮಾರ್ ಜನ್ಮದಿನದ ಅಂಗವಾಗಿ ಈ ವಾಹನಗಳನ್ನು ಟ್ರಸ್ಟ್ ವತಿಯಿಂದ ಉಚಿತವಾಗಿ ನೀಡಲಾಗುತ್ತಿದೆ ಎಂದರು.

ಒಟ್ಟು ನೂರು ಮಂದಿಗೆ ವಾಹನ ನೀಡಲು ನಿರ್ಧರಿಸಲಾಗಿದೆ. ಮೊದಲ ಹಂತದಲ್ಲಿ 22 ಮಂದಿಗೆ ವಾಹನ ವಿತರಿಸಲಾಗಿದೆ. ಉಳಿದ ಫಲಾನುಭವಿಗಳನ್ನು ಆಯ್ಕೆ ಮಾಡಿ ಶೀಘ್ರವೇ ಅವರಿಗೂ ವಾಹನಗಳನ್ನು ನೀಡಲಾಗುವುದು ಎಂದು ತಿಳಿಸಿದರು.

‘ನಾವು ಕೊಟ್ಟಿರುವ ವಾಹನ ಸರಿಯಾಗಿ ಸದುಪಯೋಗಪಡಿಸಿಕೊಂಡು ಫಲಾನುಭವಿಗಳು ಜೀವನ ಕಟ್ಟಿಕೊಂಡರೆ ಸೇವೆ ಸಾರ್ಥಕವಾಗುತ್ತದೆ. ಇದರಿಂದ ಸಂತಸ ಸಿಗುತ್ತದೆ’ ಎಂದರು.

ಈ ವಾಹನಗಳಿಗೆ ಲೈಸೆನ್ಸ್ ಅಥವಾ ರಿಜಿಸ್ಟ್ರೇಶನ್ ಅಗತ್ಯವಿಲ್ಲ. ಸ್ಥಳೀಯವಾಗಿ ಬಳಸಿಕೊಳ್ಳಬಹುದು ಎಂದು ತಿಳಿಸಿದರು.

ವಿಧಾನಪರಿಷತ್ ಸದಸ್ಯ ಎಸ್.ರವಿ, ಆರ್ಇಎಸ್ ಅಧ್ಯಕ್ಷ ಎಚ್.ಕೆ.ಶ್ರೀಕಂಠ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಡಿ.ವಿಜಯದೇವ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಎನ್.ದಿಲೀಪ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾತನೂರು ನಾಗರಾಜು, ಬೇಕುಪ್ಪೆ ಮುತ್ತುರಾಜು, ಕನಕಪುರ ಮಧು ಸೇರಿದಂತೆ ಕಾಂಗ್ರೆಸ್ ನಾಯಕರು, ನಗರಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-14-566812058

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.