ಕನಕಪುರ: ‘ನಿಖಿಲ್ ಕುಮಾರಸ್ವಾಮಿ ಅವರ ಸ್ಟೇಟಸ್ ಬಗ್ಗೆ ನನಗೆ ಗೊತ್ತಿಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ’ ಎಂದು ಹಾರೋಹಳ್ಳಿ ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಕೆ.ಎನ್.ರಾಮು ಪ್ರತಿಕ್ರಿಯಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ನಿಖಿಲ್ ಅವರು ಚಿಕ್ಕವಯಸ್ಸಿನಲ್ಲೇ ಪಕ್ಷದ ಜವಾಬ್ದಾರಿ ಹೊತ್ತು ರಾಜ್ಯದಾದ್ಯಂತ ಸಂಘಟನೆ ಮಾಡುತ್ತಿದ್ದಾರೆ. ಇದನ್ನು ಸಹಿಸದೇ ವ್ಯಂಗ್ಯವಾಗಿ ಮಾತನಾಡಿದ್ದಾರೆ’ ಎಂದು ಆರೋಪಿಸಿದರು.

‘ಒಂದು ಕಾಲದಲ್ಲಿ ನೀವೂ ನಿಖಿಲ್ ಅವರಂತೆಯೇ ಕಾಂಗ್ರೆಸ್ನಲ್ಲಿ ಆ ಹಂತದಲ್ಲಿ ಕೆಲಸ ಮಾಡಿದ್ದೀರಿ. ಆಗ ನಿಮ್ಮ ಸ್ಟೇಟಸ್ ಏನಾಗಿತ್ತು ಎಂಬುದನ್ನು ರಾಜ್ಯದ ಜನರಿಗೆ ನೀವೇ ತಿಳಿಸಬೇಕು. ಬೇರೆಯವರ ಬಗ್ಗೆ, ಇತರ ಪಕ್ಷಗಳ ಮುಖಂಡರ ಬಗ್ಗೆ ವ್ಯಂಗ್ಯವಾಗಿ ಮಾತನಾಡುವುದನ್ನು ಬಿಡಬೇಕು’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-14-1833669555

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.