ಕನಕಪುರ: ‘ಸರ್ಕಾರದ ಸವಲತ್ತುಗಳನ್ನು ಫಲಾನುಭವಿಗಳಿಗೆ ತಲುಪಿಸಲು ಯಾರಾದರೂ ಅಧಿಕಾರಿಗಳು ಮತ್ತು ಸಿಬ್ಬಂದಿ ಒಂದೇ ಒಂದು ರೂಪಾಯಿ ಹಣ ಪಡೆದರೆ ಅಂಥವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಸ್ಥಳೀಯ ಶಾಸಕರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ಅಧಿಕಾರಿಗಳು ನಮ್ಮ ತಾಲ್ಲೂಕಿನಲ್ಲಿ ಕೆಲಸ ಮಾಡುತ್ತಿರುವುದು ಅವರಿಗೆ ಸಿಕ್ಕಿರುವ ಉತ್ತಮ ಅವಕಾಶ. ಇಲ್ಲಿ ಸರಿಯಾಗಿ ಕೆಲಸ ಮಾಡಿದವರು ಉನ್ನತ ಸ್ಥಾನಕ್ಕೆ ಹೋಗಿದ್ದಾರೆ’ ಎಂದರು.

ಕೊರತೆ ಬಗ್ಗೆ ಎಚ್ಚರ ವಹಿಸಿ: ‘ಬೇಸಿಗೆಯಿಂದಾಗಿ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಸರ್ಕಾರದ ಎಲ್ಲಾ ಸವಲತ್ತುಗಳನ್ನು ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಮಾಡಬೇಕು. ಸವಲತ್ತುಗಳು ತಲುಪಿದೆಯೇ ಎಂಬುದರ ಕುರಿತು ಫಲಾನುಭವಿಗಳನ್ನು ಭೇಟಿ ಮಾಡಿ ಅವರ ಅಭಿಪ್ರಾಯ ಪಡೆದು ವಿಡಿಯೋ ಚಿತ್ರೀಕರಣ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಕನಕಪುರದಲ್ಲಿ ರಸ್ತೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ರಾಮನಗರದ ರಸ್ತೆಗಳನ್ನು ಅಗಲೀಕರಣ ಮಾಡಲು ಸರ್ಕಾರದಿಂದ ಹಣ ಮಂಜೂರು ಮಾಡಲು ಕ್ರಮ ವಹಿಸಲಾಗುವುದು. ಕನಕಪುರ ಟೌನಿಗೆ ರಿಂಗ್ ರೋಡ್ ಮಾಡಲು ಸಿದ್ಧತೆ ಕೈಗೊಳ್ಳಲಾಗಿದೆ’ ಎಂದರು.

ವಿಧಾನ ಪರಿಷತ್ ಸದಸ್ಯ ಎಸ್. ರವಿ, ಸುಧಾಮ್ ದಾಸ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ರಾಜು, ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್, ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿ.ಪಂ. ಸಿಇಒ ಅನ್ಮೋಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ವೇದಿಕೆಯಲ್ಲಿದ್ದರು. ತಹಶೀಲ್ದಾರ್ ಸಂಜಯ್, ತಾ,ಪಂ. ಇಒ ಅಭಿಲಾಷ್, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಸಭೆಗೆ ಮುಂಚೆ ತಾ.ಪಂ.ನ ನೂತನ ಸಭಾಂಗಣವನ್ನು ಡಿಸಿಎಂ ಉದ್ಘಾಟಿಸಿದರು. ಇದೇ ವೇಳೆ, ವಾರ್ತಾ ಇಲಾಖೆಯ ಮಾಧ್ಯಮ ಸಂಪರ್ಕ ನೂತನ ವಾಹನಕ್ಕೆ ಚಾಲನೆ ನೀಡಿದರು. ಅರಣ್ಯ ಇಲಾಖೆಗೆ ಎರಡು ವಾಹನಗಳನ್ನು ಹಸ್ತಾಂತರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-14-1726306633

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.