ಕನಕಪುರ: ನವೋದಯ ಆಸ್ಪತ್ರೆಯ ವೈದ್ಯ ಡಾ.ಚೇತನ್ ಟೆಂಕರ್(56) ಬುಧವಾರ ಬೆಳಗ್ಗೆ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರಿಗೆ ಪತ್ನಿ ಹಾಗೂ ಪುತ್ರರಿದ್ದಾರೆ. ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಕುಟುಂಬದವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನಗರದ ವಾಣಿ ಟಾಕೀಸ್ ರಸ್ತೆಯಲ್ಲಿ ನವೋದಯ ಆಸ್ಪತ್ರೆ ಹೊಂದಿದ್ದ ಅವರು, ನಗರದ ಚನ್ನಬಸಪ್ಪ ಲೇಔಟ್ನಲ್ಲಿ ವಾಸವಾಗಿದ್ದರು.

ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಹಸ್ತಾಂತರಿಸಿದರು. ಬುಧವಾರ ಸಂಜೆ ವೇಳೆಗೆ ಕುರುಪೇಟೆ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-14-442206286

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.