ಕನಕಪುರ: ರಸ್ತೆ ಬದಿಯಲ್ಲಿ ಅಕ್ರಮವಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಶುಕ್ರವಾರ ನಗರದ ಬೈಪಾಸ್ ರಸ್ತೆ ಮಹಾರಾಜರಕಟ್ಟೆ ರಸ್ತೆ ಬಳಿ ನಡೆದಿದೆ.

ನಗರದ ಮುಸ್ಲಿಂ ಬ್ಲಾಕ್ ಮತ್ತು ಕಾಲಕ ನಗರದ ನಿವಾಸಿಗಳಾದ ಮಹಮ್ಮದ್ ಹಸನ್ (20), ಮುಬಾರಕ್ ಪಾಷಾ (19), ಆಕಿಲ್ ಪಾಷಾ (21) ಬಂಧಿತರು.

ನಗರದ ಬೈಪಾಸ್ ರಸ್ತೆಯಲ್ಲಿರುವ ಕೃಷ್ಣಪ್ಪ ಮತ್ತು ನಾರಾಯಣಪ್ಪ ಅವರ ಜಮೀನಿನಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಗಿರಿ, ಸರ್ಕಲ್ ಇನ್ಸ್ಪೆಕ್ಟರ್ ಅನಂತ್ ರಾಮ್ ಮತ್ತು ಸಿಬ್ಬಂದಿಗಳು ದಾಳಿ ನಡೆಸಿದರು.

ದಾಳಿ ವೇಳೆ ಆರು ಮಂದಿ ಆರೋಪಿಗಳು ಡ್ರಗ್ಸ್ ಮಾರಾಟ ಮಾಡುತ್ತಿದ್ದು ಮೂವರು ಪರಾರಿಯಾಗಿದ್ದಾರೆ. ಮೂವರು ಸಿಕ್ಕಿ ಬಿದ್ದಿದ್ದಾರೆ. ಆರೋಪಿಗಳಿಂದ 14 ಗ್ರಾಂ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಬಂಧಿತ ಆರೋಪಿಗಳ ವಿರುದ್ಧ ಸಬ್ ಇನ್ಸ್ಪೆಕ್ಟರ್ ರತ್ನಮ್ಮ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-14-422138920

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.