ಕನಕಪುರ: ತಾಲ್ಲೂಕಿನ ದೊಡ್ಡ ಮುದವಾಡಿ ಗ್ರಾಮದ ಬಳಿ ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಯೊಬ್ಬ ಮಾರಕಾಸ್ತ್ರ ತೋರಿಸಿ ಜೀವ ಬೆದರಿಕೆ ಹಾಕಿ ₹47 ಸಾವಿರ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ತಾಲ್ಲೂಕಿನ ಕಸಬಾ ಹೋಬಳಿ ಪಿ.ರಾಂಪುರ ಗ್ರಾಮದ ಸತೀಶ್ ಹಣ ಕಳೆದುಕೊಂಡು ಹಾಗೂ ಹಲ್ಲೆಗೊಳಗಾದ ವ್ಯಕ್ತಿ. ಪ್ರಕರಣ ಸಂಬಂಧ ಹಾರೋಹಳ್ಳಿ ತಾಲ್ಲೂಕು ಗೂಗರೆದೊಡ್ಡಿಯ ಶ್ರೀಧರ ಮತ್ತು ರಾಜೀವ ಎಂಬುವವರ ವಿರುದ್ಧ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಏಪ್ರಿಲ್ 1ರ ಬುಧವಾರ ರಾತ್ರಿ 7 ಗಂಟೆ ಸಮಯದಲ್ಲಿ ಸತೀಶ್ ದೊಡ್ಡ ಮುದವಾಡಿ ಗ್ರಾಮದ ಬಳಿ ಕಾರಿನಲ್ಲಿ ಕುಳಿತಿದ್ದಾಗ ಆರೋಪಿಗಳಾದ ಶ್ರೀಧರ ಮತ್ತು ರಾಜೀವ್ ಬಂದು ಕಾರಿನ ಮುಂಭಾಗದ ಗಾಜು ಹೊಡೆದು ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ‘ಕುಡಿಯಲು ಹಣ ಕೊಡು ಇಲ್ಲದಿದ್ದರೆ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ’ ಎಂದು ಬೆದರಿಕೆ ಹಾಕಿ ಹಣ ಕೊಡದೆ ಇದ್ದಾಗ ಇಬ್ಬರು ಸೇರಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿ ರಾಜೀವ್ ತನ್ನ ಬಳಿ ಇದ್ದ ಲಾಂಗ್ ಅನ್ನು ಸತೀಶನ ಕುತ್ತಿಗೆ ಬಳಿ ಇಟ್ಟು ಜೀವ ಬೆದರಿಕೆ ಹಾಕಿ ಕೊಲೆ ಮಾಡುವ ಉದ್ದೇಶದಿಂದಲೇ ಲಾಂಗ್ನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಅವರಿಂದ ತಪ್ಪಿಸಿಕೊಳ್ಳಲು ಕೆಳಗೆ ಬಿದ್ದಾಗ ತನ್ನ ಜೇಬಿನಲ್ಲಿದ್ದ ₹47 ಸಾವಿರ ಹಣ ಕಿತ್ತಿಕೊಂಡು ಪರಾರಿಯಾಗಿದ್ದಾರೆ ಎಂದು ಸತೀಶ್ ಗ್ರಾಮಾಂತರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಕೊಂಡು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-14-79624232

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.