ಕನಕಪುರ: ತಳಮಟ್ಟದ ಆರೋಗ್ಯ ಕೇಂದ್ರಗಳನ್ನು ಬಲಪಡಿಸಿದಾಗ ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಆರೋಗ್ಯಸೇವೆ ಮತ್ತು ಚಿಕಿತ್ಸೆ ಸಾರ್ವಜನಿಕವಾಗಿ ಸಿಗುತ್ತದೆ ಎಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅಭಿಪ್ರಾಯಪಟ್ಟರು.

ತಾಲ್ಲೂಕು ಆಸ್ಪತ್ರೆಯಲ್ಲಿ ಚೆನ್ನಮ್ಮ ದೇವೇಗೌಡ ಚಾರಿಟಬಲ್ ಟ್ರಸ್ಟ್ನಿಂದ ₹31.5 ಲಕ್ಷದ ಶಸ್ತ್ರಚಿಕಿತ್ಸೆ ಉಪಕರಣಗಳನ್ನು ಶುಕ್ರವಾರ ಆಸ್ಪತ್ರೆಗೆ ಹಸ್ತಾಂತರಿಸಿ ಮಾತನಾಡಿದರು.

ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯ ಸೇವೆ ಪ್ರತಿಯೊಬ್ಬರಿಗೂ ಸಿಗಬೇಕು. ನಗರ ಪ್ರದೇಶಗಳಿಗೆ ಗ್ರಾಮೀಣ ಜನತೆ ಬರುವುದನ್ನು ತಪ್ಪಿಸಲು ತಳಮಟ್ಟದಲ್ಲಿ ಸೌಕರ್ಯ ಕಲ್ಪಿಸಬೇಕು ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳ ಉನ್ನತಿಕರಣವಾಗಬೇಕು. ಇಲ್ಲಿನ ಹೆರಿಗೆ ಆಸ್ಪತ್ರೆಯಲ್ಲಿ ತಿಂಗಳಿಗೆ 150ರಷ್ಟು ಹೆರಿಗೆ ಆಗುತ್ತಿದೆ. ಆದರೆ ಮೂಲಸೌಕರ್ಯ, ಯಂತ್ರೋಪಕರಣಗಳ ಕೊರತೆ ಇರುವುದಾಗಿ ಆಸ್ಪತ್ರೆಯ ಎಎಂಒ ಡಾ.ಪ್ರತಿಭಾದೇವಿ ತಿಳಿಸಿದ್ದರು. ಟ್ರಸ್ಟ್ನಿಂದ ₹31.5 ಲಕ್ಷದ ಉಪಕರಣಗಳನ್ನು ಖರೀದಿಸಿ ಹಸ್ತಾಂತರಿಸಲಾಗಿದೆ ಎಂದರು.

ಇಂದಿನ ಜೀವನ ಶೈಲಿಯಿಂದ ರೋಗಗಳು ಹೆಚ್ಚಾಗುತ್ತಿವೆ. ಹಿಂದಿನ ಕಾಲದಲ್ಲಿ ಮಕ್ಕಳು ತಂದೆ– ತಾಯಿಯನ್ನು ಆಸ್ಪತ್ರೆಗೆ ಕರೆತರುತ್ತಿದ್ದರು. ಇಂದು ತಂದೆ– ತಾಯಿ ಮಕ್ಕಳನ್ನು ಆಸ್ಪತ್ರೆಗೆ ಕರೆತರುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕನಕಪುರದಲ್ಲಿ ಸಿಟಿ ಸ್ಕ್ಯಾನ್ ಸೌಲಭ್ಯವಿಲ್ಲ, ಮುಂದಿನ ದಿನಗಳಲ್ಲಿ ಅದರ ವ್ಯವಸ್ಥೆ ಮಾಡಲಾಗುವುದು. ಅದುವರೆಗೆ ದಯಾನಂದ ಸಾಗರ್ ಆಸ್ಪತ್ರೆಯೊಂದಿಗೆ ಒಡಂಬಡಿಕೆ ಮಾಡಿಕೊಂಡು ಜನರು ಅಲೆದಾಡುವುದನ್ನು ತಪ್ಪಿಸಬೇಕು ಎಂದರು.

ಅನಸೂಯ ಮಂಜುನಾಥ್, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಮಂಜುನಾಥ್, ಐಪಿಪಿ ಆಸ್ಪತ್ರೆ ಆಡಳಿತ ಅಧಿಕಾರಿ ಡಾ.ಪ್ರತಿಮಾದೇವಿ, ದಿಶಾ ಸಮಿತಿ ಸದಸ್ಯೆ ಶೋಭಾ ಶಿವಲಿಂಗೇಗೌಡ, ಬಿಜೆಪಿ ಅಧ್ಯಕ್ಷ ಕೆ.ಪಿ.ಕುಮಾರ್, ಚೂಡಾಮಣಿ, ಚಂದ್ರು ಸೇರಿದಂತೆ ಆಸ್ಪತ್ರೆ ವೈದ್ಯರು, ನೌಕರರು, ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-14-2089546430

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.