ಕನಕಪುರ: ‘ನಿಖಿಲ್ ಕುಮಾರಸ್ವಾಮಿ ಅವರ ಸ್ಟೇಟಸ್ ಬಗ್ಗೆ ಅವಹೇಳನ ಮಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ತಮಿಳುನಾಡಿನ ವಿಜಯ್ ಅವರನ್ನೂ ಅವಮಾನಿಸಿದ್ದಾರೆ. ಆದರೆ, ಫಲಿತಾಂಶ ಬಳಿಕ ವಿಜಯ್ ಅವರ ಪಕ್ಷಕ್ಕೆ ಬೆಂಬಲ ನೀಡಲು ಹೋಗಿದ್ದೀರಿ ನಿಮಗೆ ನಾಚಿಕೆಯಾಗುವುದಿಲ್ಲವೇ’ ಎಂದು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಬಿ.ನಾಗರಾಜು ಆಕ್ರೋಶ ವ್ಯಕ್ತಪಡಿಸಿದರು.

‘ನಿಖಿಲ್ ಮೂರು ಚುನಾವಣೆಗಳಲ್ಲಿ ಸೋತರೂ ಜನರ ಮುಂದೆಯೇ ಹೋರಾಟ ಮುಂದುವರಿಸಿದ್ದಾರೆ. ನೀವು ಸೋಲು ಸಹಿಸಲಾರದೆ ಸೋದರನನ್ನು ಆಶ್ರಯ ಸಮಿತಿ, ಬಮುಲ್ ಅಧ್ಯಕ್ಷರನ್ನಾಗಿ ಮಾಡಿಕೊಂಡಿದ್ದೀರಿ. ಇದು ನಿಮ್ಮ ಸ್ಟೇಟಸ್’ ಎಂದು ಟೀಕಿಸಿದರು.

‘ಬಿಡದಿ ಟೌನ್ ಶಿಪ್ ಯೋಜನೆಯಲ್ಲಿ ರೈತರ ಅಭಿಪ್ರಾಯ ಪಡೆಯದೆ ದುರಹಂಕಾರದಿಂದ ವರ್ತಿಸುತ್ತಿದ್ದೀರಿ. ಕುಮಾರಸ್ವಾಮಿ ಕುಟುಂಬ ಎಲ್ಲಿಂದಲೋ ಬಂದವರೆಂದರೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬಗ್ಗೆ ಏಕೆ ಪ್ರಶ್ನಿಸುವುದಿಲ್ಲ’ ಎಂದರು.

‘ನಿಖಿಲ್ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡದಿದ್ದರೆ ತಾಲ್ಲೂಕಿನಿಂದಲೇ ಹೋರಾಟ ಆರಂಭಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-14-1760364312

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.