ಕನಕಪುರ: ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಕೊಳಗೊಂಡನಹಳ್ಳಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ 6 ಎಕರೆ 9 ಗುಂಟೆ ಜಮೀನನ್ನು ಕಬಳಿಸುವ ಯತ್ನದ ವಿರುದ್ಧ ಪೊಲೀಸ್ ಅಧಿಕಾರಿಗಳು ಕ್ರಮಕೈಗೊಳ್ಳುತ್ತಿಲ್ಲ ಎಂದು ಸಂತ್ರಸ್ತ ಕುಟುಂಬದ ಶಿವ ಎಂ. ಎಂಬುವರು ಶನಿವಾರ ಆರೋಪಿಸಿದ್ದಾರೆ.

ಮಹದೇವಮ್ಮ ಉರುಫ್ ಪುಟ್ಟ ಮಾದಮ್ಮ ಮತ್ತು ಮಹದೇವಮ್ಮ ಹಾಗೂ ಮಹದೇವಶೆಟ್ಟಿ ಎಂಬುವರ ಜಂಟಿ ಖಾತೆಯಲ್ಲಿರುವ 6 ಎಕರೆ 9 ಗುಂಟೆ ಜಮೀನಿನ ನಕಲಿ ದಾಖಲೆ ಸೃಷ್ಟಿಸಿ ಕಬಳಿಸುವ ಯತ್ನ ನಡೆದಿದೆ. ಅದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್ ದೂರು ನೀಡಿದ್ದರೂ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಗ್ರಾಮದ ಐವರ ವಿರುದ್ಧ ದಾಖಲೆ ಸಮೇತ ದೂರು ನೀಡಲಾಗಿದ್ದು, ಕೋಡಿಹಳ್ಳಿ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಆದರೆ ಅವರನ್ನು ಈವರೆಗೂ ಬಂಧಿಸಿಲ್ಲ. ಅಲ್ಲದೆ ಸಹಕಾರ ನೀಡಿದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ದೂರುದಾರರು ಆರೋಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-15-823570135

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.