ಕನಕಪುರ: ಬೆಂಗಳೂರು ರಸ್ತೆಯ ರಾಯಸಂದ್ರ ಕೆಎಚ್ಬಿ ಬಡಾವಣೆಗೆ ಹೊಂದಿಕೊಂಡಿರುವ 25 ಎಕರೆ ಜಾಗದಲ್ಲಿ ₹450 ಕೋಟಿ ವೆಚ್ಚದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಗುರುವಾರ ಭೂಮಿ ಪೂಜೆ ನೆರವೇರಿಸಲಾಯಿತು.

ಕನಕಪುರ ತಾಲ್ಲೂಕಿನ ಬಹುದಿನಗಳ ಕನಸಾಗಿದ್ದ ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ಎರಡು ವರ್ಷಗಳಲ್ಲಿ ಪೂರ್ಣಗೊಳ್ಳಲಿದೆ. ಆದರೆ, ಮುಂದಿನ ವರ್ಷದಿಂದಲೇ ವೈದ್ಯಕೀಯ ಕಾಲೇಜು ಕಾರ್ಯಾರಂಭ ಮಾಡಲಿದ್ದು, ತಾಲ್ಲೂಕಿನ ಜನರಿಗೆ ವೈದ್ಯಕೀಯ ಸೇವೆ ದೊರೆಯಲಿದೆ ಎಂದು ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದರು.

ಗುರುವಾರ ಒಳ್ಳೆಯ ಸಮಯವಾಗಿರುವುದರಿಂದ ಸರಳವಾಗಿ ಭೂಮಿಪೂಜೆ ನೆರವೇರಿಸಿದ್ದೇವೆ. ಮುಂದೆ ಅಧಿಕೃತವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ವೈದ್ಯಕಿಯ ಸಚಿವರ ಸಮ್ಮುಖದಲ್ಲಿ ಭರ್ಜರಿಯಾಗಿ ಭೂಮಿಪೂಜೆ ನೆರವೇರಿಸುವುದಾಗಿ ಹೇಳಿದರು.

ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣಕ್ಕಾಗಿ ಕೆಎಚ್ಬಿಯಿಂದ 25 ಎಕರೆ ಜಾಗ ಖರೀದಿಸಲಾಗಿದೆ. ಇಂದಿನ ಅವಶ್ಯಕತೆಗೆ ತಕ್ಕಂತೆ ಅತ್ಯಾಧುನಿಕ ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣವಾಗಲಿದೆ. ನಿಗದಿತ ಅವಧಿಯೊಳಗೆ ತ್ವರಿತವಾಗಿ ನಿರ್ಮಾಣ ಕಾರ್ಯ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದರು.

ಕನಕಪುರ ತಾಲ್ಲೂಕಿಗೆ ಮೆಡಿಕಲ್ ಕಾಲೇಜು ತರುವಲ್ಲಿ ಸಾಕಷ್ಟು ಅಡ್ಡಿ, ಆತಂಕ ಎದುರಾದವು. ಈ ಹಿಂದೆ ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಹಿಂದಿನ ಬಿಜೆಪಿ ಸರ್ಕಾರದಲ್ಲಿ ಉದ್ದೇಶಪೂರ್ವಕವಾಗಿ ಬೇರೆಡೆಗೆ ಸ್ಥಳಾಂತರಿಸಲಾಯಿತು. ಹಠ ಬಿಡದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಲ್ಲ ಸಮಸ್ಯೆ ನಿವಾರಿಸಿ ಕನಕಪುರಕ್ಕೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿಸಿ, ಟೆಂಡರ್ಗೆ ಹಣವನ್ನೂ ಬಿಡುಗಡೆ ಮಾಡಿಸಿದ್ದಾರೆ ಎಂದರು.

ವಿಧಾನಪರಿಷತ್ ಸದಸ್ಯ ಎಸ್.ರವಿ, ಬಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ನಾರಾಯಣಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಎನ್.ದಿಲೀಪ್, ಕಾಲೇಜು ನಿರ್ಮಾಣದ ಗುತ್ತಿಗೆದಾರರು, ಇಂಜಿನಿಯರ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-18-151713406

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.