ಕನಕಪುರ: ತಾಲ್ಲೂಕಿನ ಬರಡನಹಳ್ಳಿಯಲ್ಲಿ ನಿರ್ಮಾಣವಾಗಿರುವ ನವೋದಯ ಶಾಲೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಗೆ ₹6 ಕೋಟಿ ವೆಚ್ಚದ ಕಾಂಕ್ರೀಟ್ ಕಾಮಗಾರಿಗೆ ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮತ್ತು ವಿಧಾನ ಪರಿಷತ್ ಸದಸ್ಯ ಎಸ್.ರವಿ ಗುರುವಾರ ಚಾಲನೆ ನೀಡಿದರು.

ಬರಡನಹಳ್ಳಿಯಲ್ಲಿ ನವೋದಯ ಶಾಲೆಗೆ 30 ಎಕರೆ ಜಮೀನು ಮಂಜೂರಾಗಿದ್ದು, ₹40 ಕೋಟಿ ವೆಚ್ಚದಲ್ಲಿ ನಾಲ್ಕೈದು ವರ್ಷಗಳಿಂದ ಕಟ್ಟಡ ಕಾಮಗಾರಿ ನಡೆಯುತ್ತಿತ್ತು. ಶಾಲಾ ಕಟ್ಟಡ ಪೂರ್ಣಗೊಂಡಿದ್ದು ಉದ್ಘಾಟನೆ ಹಂತಕ್ಕೆ ಬಂದಿದೆ. ಈ ಬಾರಿ ಇಲ್ಲಿಯೇ ಶಾಲೆ ಪ್ರಾರಂಭ ಆಗಬೇಕಿರುವುದರಿಂದ ಚಾಕನಹಳ್ಳಿ ಮುಖ್ಯರಸ್ತೆ ಮತ್ತು ದೇಗುಲ ಮಠದ ಹೊಸ ಸೇತುವೆ ಕಡೆಯಿಂದ ಸಂಪರ್ಕ ಕಲ್ಪಿಸುವ ರಸ್ತೆಗಳು ಅಭಿವೃದ್ಧಿ ಆಗಿರಲಿಲ್ಲ. ಕಾವೇರಿ ನೀರಾವರಿ ನಿಗಮದಿಂದ 3.5 ಕಿ.ಮೀ ರಸ್ತೆ ಅಭಿವೃದ್ಧಿಗೆ ₹6 ಕೋಟಿ ಅನುದಾನ ಬಿಡುಗಡೆಯಾಗಿದ್ದು, ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಚಾಲನೆ ನೀಡಲಾಯಿತು.

ನಂತರ ಮಾತನಾಡಿದ ಡಿ.ಕೆ. ಸುರೇಶ್, ಎಂಟು ವರ್ಷಗಳ ಹಿಂದೆ ನವೋದಯ ಶಾಲೆ ತಾಲ್ಲೂಕಿನಲ್ಲಿ ಖಾಸಗಿ ಕಟ್ಟಡದಲ್ಲಿ ಪ್ರಾರಂಭವಾಯಿತು. ಡಿಕೆಎಸ್ ಟ್ರಸ್ಟ್ನಿಂದ ತಿಂಗಳಿಗೆ ₹1 ಲಕ್ಷ ಬಾಡಿಗೆ ನೀಡಲಾಗುತ್ತಿದೆ. ಈಗ 30 ಎಕರೆ ಜಾಗ ಮಂಜೂರಾಗಿದ್ದು, ಡಿ.ಕೆ. ಶಿವಕುಮಾರ್ ಸಹಕಾರದಿಂದ ಎಸ್. ರವಿ ನೇತೃತ್ವದಲ್ಲಿ ಕಟ್ಟಡ ನಿರ್ಮಾಣಕ್ಕೆ ₹40 ಕೋಟಿ, ರಸ್ತೆ ಅಭಿವೃದ್ಧಿಗೆ ₹6 ಕೋಟಿ ಬಿಡುಗಡೆಯಾಗಿದೆ ಎಂದು ಹೇಳಿದರು.

ಒಳ್ಳೆಯ ಪರಿಸರದಲ್ಲಿ ನವೋದಯ ಶಾಲೆ ಇದೆ. ಆದರೆ ಸಂಪರ್ಕ ರಸ್ತೆ ಶೀಘ್ರ ಅಭಿವೃದ್ಧಿಯಾಗಲಿದೆ. ಈ ವರ್ಷದಿಂದಲೇ ಇಲ್ಲಿ ಶಾಲೆ ನಡೆಯಲಿದೆ ಎಂದರು.

ಬಿಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ನಾರಾಯಣಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಎನ್.ದಿಲೀಪ್, ಉಪಾಧ್ಯಕ್ಷ ಮೂರ್ತಿ, ವೆಂಕಟೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುತ್ತುರಾಜು, ಬರಡನಹಳ್ಳಿ ಗ್ರಾಮಸ್ಥರು, ಚಾಕನಹಳ್ಳಿ, ಬೂದಿಗುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-14-2120812726

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.